ʼಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠʼ..!; ಸಿಎಂ ಬೊಮ್ಮಾಯಿಗೆ ಪುನೀತ್‌ ಅಭಿಮಾನಿಗಳ ಮನವಿ

Team Newsnap
1 Min Read
ʼAppu lesson in Kannada text bookʼ..!; Puneeth's fans appeal to CM Bommai ʼಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠʼ..!; ಸಿಎಂ ಬೊಮ್ಮಾಯಿಗೆ ಪುನೀತ್‌ ಅಭಿಮಾನಿಗಳ ಮನವಿ

ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಪುನೀತ್‌ ರಾಜ್‌ ಕುಮಾರ್‌ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿಗಳು ಮನವಿ ಮಾಡಿದ್ದಾರೆ.ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ: ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅತ್ತ ಪತ್ನಿ ಅಶ್ವಿನಿ

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.

Share This Article
Leave a comment