ಶತ್ರುರಾಷ್ಟ್ರಗಳ ಚಳಿ ಬಿಡಿಸಿದ್ದ ರಾವತ್ ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿದ್ದಾರೆ. ದೇಶದ ಮೊಟ್ಟಮೊದಲ ಸಿಡಿಎಸ್ ಈಗ ನಮ್ಮೊಂದಿಗಿಲ್ಲ. ಇಂದು ವೀರ ಸೇನಾನಿಯ ಅಂತಿಮಯಾತ್ರೆ ದೆಹಲಿಯಲ್ಲಿ ನಡೆಯಲಿದೆ.
ವೀರಪುತ್ರನ ಅಂತಿಮ ಯಾತ್ರೆ
ದೆಹಲಿಯ ಕಾಮ್ರಾಜ್ ಮಾರ್ಗ್ನ ಬಿಪಿನ್ ರಾವತ್ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 11ರಿಂದ 12.30ರವರೆಗೆ ಸಾರ್ವಜನಿಕರಿಂದ ಅಂತಿಮ ದರ್ಶನಕ್ಕೆ ಅವಕಾಶ ಕೊಡಲಾಗಿದೆ. ಮಧ್ಯಾಹ್ನ 12.30ರಿಂದ 1.30ರವರೆಗೆ ಸೇನಾ ಸಿಬ್ಬಂದಿಯಿಂದ ಗೌರವ ಸಲ್ಲಿಸಲಾಗುತ್ತೆ.
ಬಳಿಕ ಮಧ್ಯಾಹ್ನ 2 ಗಂಟೆಯಿಂದ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಲಿದೆ. ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಅಂತಿಮ ಯಾತ್ರೆ ಕಾಮ್ರಾಜ್ ಮಾರ್ಗ್ನ ನಿವಾಸದಿಂದ ಅಂತಿಮ ಯಾತ್ರೆ ಹೊರಡಲಿದೆ. ಇನ್ನು ಸಂಜೆ 4 ಗಂಟೆ ಸುಮಾರಿಗೆ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತೆ.
ಸದ್ಯ ಸಿಡಿಎಸ್ ಬಿಪಿನ್ ರಾವತ್ ಮನೆಯ ಮುಂದೆ ಜನ ಸಾಗರವೇ ಹರಿದು ಬರ್ತಿದೆ. ಬಿಪಿನ್ ರಾವತ್ ಅವರ ಪೋಟೋ ಫ್ಲೆಕ್ಸ್ಗಳನ್ನು ಹಿಡಿದು ಅವರ ಮನೆ ಮುಂದೆ ದೌಡಾಯಿಸ್ತಿದ್ದಾರೆ.
ಬಿಪಿನ್ ರಾವತ್ ಅಮರ್ ರಹೇ ಎಂಬ ಘೋಷಣೆಗಳನ್ನು ಮೊಳಗಿವೆ . ಮುನ್ನೆಚ್ಚರಿಕಾ ಕ್ರಮವಾಗಿ ಬಿಪಿನ್ ನಿವಾಸದ ಬಳಿ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ