ರಾಘವೇಂದ್ರ ರಾಜ್ ಕುಮಾರ್ ಎರಡನೇ ಪುತ್ರ ಯುವರಾಜ್ ಕುಮಾರ್ ಮೊದಲ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಕೊಂಡಿದೆ.
ಅಣ್ಣಾವ್ರ ಮೊಮ್ಮಗನ ಚೊಚ್ಚಲ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಕನ್ನಡ ಪ್ರೇಕ್ಷಕರು ಬಹುಪರಾಕ್ ಹಾಕಿದ್ದಾರೆ.
5 ನಿಮಿಷಗಳ ಟೀಸರ್ ಇದಾಗಿದೆ. ಭರ್ಜರಿ ಡೈಲಾಗ್ ಮತ್ತು ಜಬರ್‌ದಸ್ತ್ ಫೈಟ್ ಹೈಲೈಟ್ ಆಗಿದೆ. ಇದು ಐತಿಹಾಸಿಕ ಕಥಾ ಹಂದರ ಹೊಂದಿರುವ ಚಿತ್ರ ಎಂದು ಹೇಳಲಾಗಿದೆ.
ಸದ್ಯಕ್ಕೆ ‘ಯುವ-01’ ಎಂದು ಹೆಸರಿನಲ್ಲಿ ಸಿನಿಮಾ ಮಾಡಲಾಗುತ್ತಿದೆ. ಟೀಸರ್‌ನಲ್ಲಿ ‘ಯುವ ರಣಧೀರ ಕಂಠೀರವ’ ಎಂದು ಹೆಸರು ಪ್ರಕಟವಾಗಿದೆ.
ಕನ್ನಡ ರಾಜ್ಯೋತ್ಸವ ಪ್ರಯುಕ್ತ, ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ಕುಮಾರ್ ಸೇರಿದಂತೆ ಕುಟುಂಬ ವರ್ಗ ಭಾಗಿಯಾಗಿತ್ತು.
ಯುವ ಅವರ ಮೊದಲ ಸಿನಿಮಾಗೆ ಪುನೀತ್ ರುದ್ರನಾಗ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಟೀಸರ್‌ನಲ್ಲೇ ಸದ್ದು ಮಾಡಿದೆ. ಸಂಕೇಶ್ ಛಾಯಾಗ್ರಹಣ, ಚೇತನ್ ಡಿಸೋಜಾ ಸಾಹಸ ನಿರ್ದೇಶನವಿದೆ.
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!