November 27, 2024

Newsnap Kannada

The World at your finger tips!

jpg 1

ಅಧಿವೇಶನದಲ್ಲಿ 1200 ಪ್ರಶ್ನೆಗಳ ಸವಾಲು ಎಸೆಯಲಿರುವ ಕಾಂಗ್ರೆಸ್

Spread the love

ಬೆಂಗಳೂರು

ಸೆ. 21ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು 1,200ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸರ್ಕಾರದ ಮುಂದೆ ಇಡಲಿದ್ದಾರೆ.
ಪ್ರಶ್ನೆಗಳು ಈಗಾಗಲೇ ಸಿದ್ಧವಾಗಿವೆ. ಅದನ್ನು ವಿಧಾನಸಭೆ ಹಾಗೂ ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸುವಂತೆ ಪ್ರತಿಪಕ್ಷದ ನಾ ಯಕ ಸಿದ್ದರಾಮಯ್ಯ ಶಾಸಕರಿಗೆ ಮನವಿ ಮಾಡಿದ್ದಾರೆ.

ಮಾಜಿ ಸಚಿವರ ತಂಡ ಪ್ರಶ್ನೆಗಳನ್ನು ಸಿದ್ಧಪಡಿಸಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿ ಹಾಗೂ ವಿಧಾನಸಭೆ, ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕರ ಕಚೇರಿ ಶಾಸಕರಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಸೋಮವಾರ ಝೂಮ್ ಮೂಲಕ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ಹಲವಾರು ವಿಷಯಗಳಲ್ಲಿ ಎಡವಿದೆ. ಕೊರೊನಾ ಸೋಂಕು ನಿಯಂತ್ರಣದಲ್ಲಂತೂ ಸಂಪೂರ್ಣವಾಗಿ ವಿಫಲವಾಗಿದೆ. ಈ ಕುರಿತು ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕಿದೆ ಎಂದರು.

ಕೋವಿಡ್ ಉಪಕರಣಗಳ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆಯೂ ನಮ್ಮ ಪಕ್ಷ ಸದನದಲ್ಲಿ ಗಂಭೀರವಾಗಿ ಪ್ರಶ್ನೆ ಮಾಡಬೇಕಿದೆ ಎಂದು ಹೇಳಿದರು.
ಸರ್ಕಾರದಲ್ಲಿ ಕೆಲಸ ನಡೆಯುತ್ತಿಲ್ಲ. ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುತ್ತದೆ. ಕೇಂದ್ರದಿಂದ ನಾವು ಸಾಕಷ್ಟು ನೆರವು ಪಡೆಯುತ್ತೇವೆ ಎಂದು ಯಡಿಯೂರಪ್ಪ ಮತ್ತಿತರ ನಾಯಕರು ಹೇಳಿದ್ದರು.
ಜಿಎಸ್‍ಟಿ ವಿಚಾರದಲ್ಲಿ ಪರಿಹಾರ ಕೇಳಿದರೆ ನೀವು ಸಾಲ ಮಾಡಿ ನಷ್ಟ ತುಂಬಿಕೊಳ್ಳಿ ಎಂದು ಕೇಂದ್ರದ ಹಣಕಾಸು ಸಚಿವರು ಹೇಳುತ್ತಾರೆ. ಇಂಥ ವಿಷಯಗಳ ಮೇಲೆಯೂ ಪ್ರಶ್ನೆ ಮಾಡಬೇಕಿದೆ. ರಾಜ್ಯದಲ್ಲಿ ಆಯ್ಕೆಯಾಗಿ ಹೋಗಿರುವ25 ಸಂಸದರವೀ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಯಡಿಯೂರಪ್ಪ ಅವರು ಉಸಿರು ಎತ್ತುತ್ತಿಲ್ಲ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಮಾತ್ರ ಕೇಂದ್ರದ ನಡೆಯನ್ನು ಟೀಕಿಸಿವೆ. ಬಿಜೆಪಿ ಸರ್ಕಾರಗಳು ಕೋಲೆ ಬಸವನ ರೀತಿ ತಲೆ ಆಡಿಸುತ್ತಿವೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಈ ಕುರಿತು ಮಂತ್ರಿಗಳೇ ಅಲ್ಲಲ್ಲಿ ಮಾತನಾಡುತ್ತಿದ್ದಾರೆ. ಪರ್ಸೆಂಟೇಜ್ ಕೊಡದ ಶಾಸಕರ ಕ್ಷೇತ್ರಗಳಿಗೆ ಅನುದಾನ ಇಲ್ಲ ಎಂಬಂತೆ ಆಗಿದೆ. ಬಿಜೆಪಿ ಮಂತ್ರಿಗಳ ಕ್ಷೇತ್ರದಲ್ಲಿಯೂ ಅನುದಾನಕ್ಕಾಗಿ ಲಂಚ ನೀಡಬೇಕಾದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತಾಗಿಯೂ ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ, ವಿಧಾಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಅಜಯ್ ಸಿಂಗ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ ಇದ್ದರು.

Copyright © All rights reserved Newsnap | Newsever by AF themes.
error: Content is protected !!