ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಯು ಭಾರತೀಯ ವೈದ್ಯಕೀಯ ಸಂಶೋಧನಾ ನಿಗಮ(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್)ದ ಸಹಯೋಗದೊಂದಿಗೆ ನಡೆಸುತ್ತಿರುವ ಕೊರೋನಾ ಸೋಂಕು ನಿವಾರಕ ಲಸಿಕೆ ‘ಕೋವ್ಯಾಕ್ಸಿನ್’ನ ಮೂರನೇ ಹಂತದ ಪ್ರಯೋಗಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಸಮ್ಮತಿ ನೀಡಿದೆ.
ಈಗಾಗಲೇ ಭಾರತ್ ಬಯೋಟೆಕ್ ಕಂಪನಿಯು ಮೊದಲ ಹಾಗೂ ಎರಡನೇ ಹಂತದ ಪ್ರಯೋಗಗಳಲ್ಲಿ 18 ವರ್ಷ ವಯಸ್ಸು ಹಾಗೂ ಮೇಲ್ಪಟ್ಟ ವಯಸ್ಸಿನ ಒಟ್ಟು 28,500 ಜನರ ಮೇಲೆ ಲಸಿಕೆಯ ಪ್ರಯೋಗ ಮಾಡಲಾಗಿದೆ. ದೇಶದ 10 ರಾಜ್ಯಗಳ 19 ಸ್ಥಳಗಳಲ್ಲಿ ಲಸಿಕೆಯನ್ನು ಪ್ರಯೋಗ ಮಾಡಲಾಗಿದೆ.
ಕೋವ್ಯಾಕ್ಸಿನ್ ಮೊದಲ ಹಾಗೂ ಎರಡನೇ ಹಂತದ ಪ್ರಯೋಗದ ಬಳಿಕ ಭಾರತ್ ಬಯೋಟೆಕ್ ಕಂಪನಿ ತನ್ನ ವರದಿಗಳನ್ನು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಓ) ಗೆ ಸಲ್ಲಿಸಿತ್ತು. ಸಿಡಿಸಿಓದ ವಿಶೇಷ ತಂಡ ಲಸಿಕೆಯಲ್ಲಿನ ಸುರಕ್ಷತೆ ಹಾಗೂ ಪ್ರತಿರೋಧಕ ಶಕ್ತಿಯ ಬಗ್ಗೆ ಅಧ್ಯಯನ ಮಾಡಿ ಡಿಸಿಜಿಐಗೆ ಲಸಿಕೆಯ ಬಗ್ಗೆ ಶಿಫಾರಸು ಮಾಡಲಾಗಿತ್ತು.
ವರದಿಗಳನ್ನು ಅಧ್ಯಯನ ಮಾಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಮೂರನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡಿದೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ