ನನ್ನ ಸರ್ಕಾರ ಉರುಳಿಸಿದ್ದು ಡ್ರಗ್ಸ್ ದಂಧೆಕೋರರು ಮಾಜಿ ಸಿಎಂ ಎಚ್ ಡಿ ಕೆ

Team Newsnap
1 Min Read

ನನ್ನ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್​​​ ಸಿಡಿಸಿದ್ದಾರೆ.
ಜಿಲ್ಲೆಯ ತುರುವೆಕೆರೆಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ
ನಶೆ ಮಾಫಿಯಾ ಪ್ರತಿ ಕ್ರಿಯೆ ನೀಡಿ,
ನಾನು ಸಿಎಂ ಆಗಿದ್ದಾಗ ಡ್ರಗ್ಸ್​ ದಂಧೆಗೆ ಬ್ರೇಕ್​​​​​​ ಹಾಕಲು ಯತ್ನಿಸಿದ್ದೆ. ಈ ವೇಳೆ ಕೆಲವರು ಶ್ರೀಲಂಕಾಗೆ ಓಡಿ ಹೋದರು. ನನ್ನ ಸರ್ಕಾರ ಬೀಳಿಸೋಕೆ ಡ್ರಗ್ಸ್​ , ಬೆಟ್ಟಿಂಗ್​ ಹಣ ಬಳಕೆ ಆಯ್ತು ಎಂದು ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.

ನನ್ನ ಸರ್ಕಾರ ಬೀಳಿಸೋಕೆ ಡ್ಯಾನ್ಸ್ ಬಾರ್​ಗಳ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಕ್ರಿಕೆಟ್​ ಬೆಟ್ಟಿಂಗ್​​, ಪಬ್​​​ ಹಣ ಬಳಸಿ ಮೈತ್ರಿ ಸರ್ಕಾರ ಕೆಡವಿದ್ರು ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಇಂತಹ ಕೆಟ್ಟ ಮಾಫಿಯಾಗಳಿಗೆ ಚಿಕ್ಕ, ಚಿಕ್ಕ ಮಕ್ಕಳು ಬಲಿಯಾಗಬಾರದು. ಆದ್ದರಿಂದ ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗದೆ, ಈ ಹಗರಣದ ಹಿಂದೆ ಯಾರೇ ಪ್ರಭಾವಿ ವ್ಯಕ್ತಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ಜರುಗಬೇಕು ಎಂದು ಹೆಚ್​ ಡಿ ಕೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share This Article
Leave a comment