ನ್ಯಾಸ್ ಸ್ನ್ಯಾಪ್
ಬೆಂಗಳೂರು
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿಯರಾದ ರಾಗಿಣಿ, ಸಂಜನಾ ಅವರನ್ನು ನಗರದ 1 ನೇ ಎಸಿಎಂಎಂ ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ
ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
ವಿಚಾರಣಾಧೀನದಲ್ಲಿರುವ ಇಬ್ಬರು ಆರೋಪಿಗಳನ್ನು ಮತ್ತಷ್ಟು ತನಿಖೆ ಮಾಡುವ ಅಗತ್ಯ ಇರುವುದರಿಂದ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು 3 ದಿನಗಳ ಕಾಲ ಮಾತ್ರ ಕಸ್ಟಡಿಗೆ ನೀಡಿ ಆದೇಶ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಪೊಲೀಸರು ಇಬ್ಬರು ನಟಿಯರಿಂದಲೂ ಮತ್ತಷ್ಟು ಮಾಹಿತಿ, ಸಾಕ್ಷ್ಯಗಳನ್ನು ಕಲೆ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು