ರಾಜ್ಯದ ಇಬ್ಬರು ಸೇರಿ‌ 32 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟ

Team Newsnap
1 Min Read

ರಾಜ್ಯದ ಇಬ್ಬರು ಬಾಲಕರು ಸೇರಿ ದೇಶದ 32 ಮಕ್ಕಳು ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೆ. ರಾಕೇಶ್‌ಕೃಷ್ಣ ಮತ್ತು ವೀರ್‌ ಕಶ್ಯಪ್‌ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ ಮಕ್ಕಳು.

ರಾಕೇಶ್‌ ಕೃಷ್ಣ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದವರು. ವೀರ್‌ ಕಶ್ಯಪ್‌ ಬೆಂಗಳೂರಿನವರು.

ಇವರಿಬ್ಬರಿಗೂ ಆವಿಷ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಿದೆ. ಕೊರೋನಾ ವೈರಸ್‌ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಹಾವು-ಏಣಿ ಮಾದರಿಯ ‘ಕೊರೋನಾ ಯುಗ’ ಎಂಬ ವಿಶಿಷ್ಟಆಟ ಕಂಡುಹಿಡಿದರು ವೀರ್‌ ಕಶ್ಯಪ್‌.

ಕ್ರೀಡೆ, ಕಲೆ, ಸಂಸ್ಕೃತಿ, ಸಾಮಾಜಿಕ ಸೇವೆ, ಶೌರ‍್ಯ, ಶಾಲಾ ಸಂಬಂಧಿ ಚಟುವಟಿಕೆ, ಆವಿಷ್ಕಾರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 18 ವರ್ಷದೊಳಗಿನ ಬಾಲ ಪ್ರತಿಭೆಗಳನ್ನು ಗುರುತಿಸಿ ಸರ್ಕಾರ ಪ್ರತಿ ವರ್ಷ ಈ ಪ್ರಶಸ್ತಿ ನೀಡುತ್ತಿದೆ.

ಪ್ರಶಸ್ತಿಯು ಪದಕ ಮತ್ತು 1 ಲಕ್ಷ ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 11ಗಂಟೆಗೆ (ಸೋಮವಾರ) ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ.

32 ಮಂದಿ ಮಕ್ಕಳು ವಿಜೇತರು:

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ’21 ರಾಜ್ಯಗಳ 32 ಮಕ್ಕಳು ಬಾಲ ಪುರಸ್ಕಾರ ಪ್ರಶಸ್ತಿ ನೀಡಿದೆ.

ಆವಿಷ್ಕಾರ ಕ್ಷೇತ್ರದಲ್ಲಿ 9 ಮಕ್ಕಳಿಗೆ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ 7 ಮಕ್ಕಳಿಗೆ, ಶಾಲಾ ಸಂಬಂಧಿ ಚಟುವಟಿಕೆ ಕ್ಷೇತ್ರದಲ್ಲಿ ಐವರು, ಕ್ರೀಡಾ ಕ್ಷೇತ್ರದಲ್ಲಿ 7, ಶೌರ‍್ಯ ಕ್ಷೇತ್ರದಲ್ಲಿ ಮೂವರಿಗೆ ಹಾಗೂ ಸಾಮಾಜಿ ಸೇವೆ ಕ್ಷೇತ್ರದಲ್ಲಿ ಓರ್ವ ಮಗುವಿಗೆ ಪ್ರಶಸ್ತಿ ನೀಡಲಾಗುತ್ತಿದೆ

Share This Article
Leave a comment