ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಸಂತ್ರಸ್ತರಿಗೆ ಇನ್ನು ಮುಂದೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ಹಾಗೂ ನರ್ಸಿಂಗ್ ಹೋಂಗೆ ತೆರಳಿದ್ರೂ ಕೂಡ
ಉಚಿತ ಚಿಕಿತ್ಸೆ ಸಿಗಲಿದೆ.
ಕೇಂದ್ರ ರಸ್ತೆ ಹಾಗೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಮಾಹಿತಿ ಪ್ರಕಟಿಸಿದ್ದಾರೆ.
- ಕೇಂದ್ರ ಸರ್ಕಾರ ನೂತನ ಯೋಜನೆಯ ಪ್ರಕಾರ ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ವ್ಯಕ್ತಿಗೆ 1.5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸಾ ವ್ಯವಸ್ಥೆ ಸಿಗಲಿದೆ.
- ಹೆಚ್ಚಿನ ಚಿಕಿತ್ಸೆಗಾಗಿ ದೂರದ ಆಸ್ಪತ್ರೆಗಳಿಗೆ ಕಳಿಸುವ ವ್ಯವಸ್ಥೆಯನ್ನೂ ಸರ್ಕಾರವೇ ಮಾಡಲಿದೆ. ರಸ್ತೆ ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ.
- ಅಪಘಾತಕ್ಕೀಡಾದ ವ್ಯಕ್ತಿ ಸಾವಿಗೀಡಾದರೆ ಈ ಪರಿಹಾರದ ಮೊತ್ತ ಮೃತರ ಕುಟುಂಬಸ್ಥರಿಗೆ ಸಿಗಲಿದೆ.
- ರಾಷ್ಟ್ರೀಯ ನಗದುರಹಿತ ಚಿಕಿತ್ಸಾ ಯೋಜನೆಯ ಅಡಿಯಲ್ಲಿ ಈ ಎಲ್ಲಾ ಪ್ರಯೋಜನ ಸಿಗಲಿದೆ.
- ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಭಾರತೀಯರ ಜೊತೆಯಲ್ಲಿ ವಿದೇಶಿ ಪ್ರವಾಸಿಗರನ್ನೂ ಸೇರಿಸಿಕೊಳ್ಳಲಾಗಿದೆ.
- ಎಕ್ಸ್ಪ್ರೆಸ್ವೇ, ಗ್ರೀನ್ ಫೀಲ್ಡ್ ಎಕ್ಸ್ಪ್ರೆಸ್ ವೇ, ರಾಷ್ಟ್ರೀಯ ರಾಜಮಾರ್ಗ, ಪ್ರದೇಶ ರಾಜಮಾರ್ಗ, ಜಿಲ್ಲಾ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ನಡೆಯುವ ಅಪಘಾತಕ್ಕೆ ಈ ಯೋಜನೆ ಸೌಲಭ್ಯ ಸಿಗಲಿದೆ.
- ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವ ಸರಿ ಸುಮಾರು 5.5 ಲಕ್ಷ ಮಂದಿಯಲ್ಲಿ 4.5 ಲಕ್ಷ ಮಂದಿ ಈ ಯೋಜನೆಯ ಲಾಭ ಪಡೆಯಬಹುದು.
- ಚಿಕಿತ್ಸೆಯ ವೆಚ್ಚದ ಈ ನಿಬಂಧನೆಯನ್ನು ವಾಹನ ಅಪಘಾತ ನಿಧಿಯಿಂದ ಮಾಡಲಾಗುವುದು. ನಗದು ರಹಿತ ಚಿಕಿತ್ಸೆಗಾಗಿ ವಾಹನಗಳನ್ನು ವಿಮೆ ಮಾಡುವ ಸಾಮಾನ್ಯ ವಿಮಾ ಕಂಪನಿಗಳ ಗಳಿಕೆಯ ಒಂದು ಭಾಗವನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
- ಟೋಲ್ ತೆರಿಗೆ ಹೊಂದಿರುವ ವಾಹನಗಳಿಂದ ವಿಧಿಸಲಾಗುವ ಸೆಸ್‌ನ ಒಂದು ಭಾಗವನ್ನು ಈ ನಿಧಿಯಲ್ಲಿ ನೀಡಲಾಗುವುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ