Main News

ರಸ್ತೆ ಅಪಘಾತದಲ್ಲಿ ಗಾಯಗೊಂಡರೆ 1 .5 ಲಕ್ಷ ರು ಉಚಿತ ಚಿಕಿತ್ಸೆ – ಕೇಂದ್ರ

ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಸಂತ್ರಸ್ತರಿಗೆ ಇನ್ನು ಮುಂದೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ಹಾಗೂ ನರ್ಸಿಂಗ್​ ಹೋಂಗೆ ತೆರಳಿದ್ರೂ ಕೂಡ
ಉಚಿತ ಚಿಕಿತ್ಸೆ ಸಿಗಲಿದೆ.

ಕೇಂದ್ರ ರಸ್ತೆ ಹಾಗೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಈ ಮಾಹಿತಿ ಪ್ರಕಟಿಸಿದ್ದಾರೆ.

  • ಕೇಂದ್ರ ಸರ್ಕಾರ ನೂತನ ಯೋಜನೆಯ ಪ್ರಕಾರ ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ವ್ಯಕ್ತಿಗೆ 1.5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸಾ ವ್ಯವಸ್ಥೆ ಸಿಗಲಿದೆ.
  • ಹೆಚ್ಚಿನ ಚಿಕಿತ್ಸೆಗಾಗಿ ದೂರದ ಆಸ್ಪತ್ರೆಗಳಿಗೆ ಕಳಿಸುವ ವ್ಯವಸ್ಥೆಯನ್ನೂ ಸರ್ಕಾರವೇ ಮಾಡಲಿದೆ. ರಸ್ತೆ ಅಪಘಾತದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ.
  • ಅಪಘಾತಕ್ಕೀಡಾದ ವ್ಯಕ್ತಿ ಸಾವಿಗೀಡಾದರೆ ಈ ಪರಿಹಾರದ ಮೊತ್ತ ಮೃತರ ಕುಟುಂಬಸ್ಥರಿಗೆ ಸಿಗಲಿದೆ.
  • ರಾಷ್ಟ್ರೀಯ ನಗದುರಹಿತ ಚಿಕಿತ್ಸಾ ಯೋಜನೆಯ ಅಡಿಯಲ್ಲಿ ಈ ಎಲ್ಲಾ ಪ್ರಯೋಜನ ಸಿಗಲಿದೆ.
  • ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಭಾರತೀಯರ ಜೊತೆಯಲ್ಲಿ ವಿದೇಶಿ ಪ್ರವಾಸಿಗರನ್ನೂ ಸೇರಿಸಿಕೊಳ್ಳಲಾಗಿದೆ.
  • ಎಕ್ಸ್​ಪ್ರೆಸ್​ವೇ, ಗ್ರೀನ್​ ಫೀಲ್ಡ್ ಎಕ್ಸ್​ಪ್ರೆಸ್​ ವೇ, ರಾಷ್ಟ್ರೀಯ ರಾಜಮಾರ್ಗ, ಪ್ರದೇಶ ರಾಜಮಾರ್ಗ, ಜಿಲ್ಲಾ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ನಡೆಯುವ ಅಪಘಾತಕ್ಕೆ ಈ ಯೋಜನೆ ಸೌಲಭ್ಯ ಸಿಗಲಿದೆ.
  • ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವ ಸರಿ ಸುಮಾರು 5.5 ಲಕ್ಷ ಮಂದಿಯಲ್ಲಿ 4.5 ಲಕ್ಷ ಮಂದಿ ಈ ಯೋಜನೆಯ ಲಾಭ ಪಡೆಯಬಹುದು.
  • ಚಿಕಿತ್ಸೆಯ ವೆಚ್ಚದ ಈ ನಿಬಂಧನೆಯನ್ನು ವಾಹನ ಅಪಘಾತ ನಿಧಿಯಿಂದ ಮಾಡಲಾಗುವುದು. ನಗದು ರಹಿತ ಚಿಕಿತ್ಸೆಗಾಗಿ ವಾಹನಗಳನ್ನು ವಿಮೆ ಮಾಡುವ ಸಾಮಾನ್ಯ ವಿಮಾ ಕಂಪನಿಗಳ ಗಳಿಕೆಯ ಒಂದು ಭಾಗವನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
  • ಟೋಲ್ ತೆರಿಗೆ ಹೊಂದಿರುವ ವಾಹನಗಳಿಂದ ವಿಧಿಸಲಾಗುವ ಸೆಸ್‌ನ ಒಂದು ಭಾಗವನ್ನು ಈ ನಿಧಿಯಲ್ಲಿ ನೀಡಲಾಗುವುದು.
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024