ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದೆ. ಲೀಟರ್ ಹಾಲಿಗೆ 1.50 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಪಶು ಆಹಾರದ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲಾಗಿದ್ದಾರೆ.
ಮನ್ಮುಲ್ ಆಡಳಿತ ಮಂಡಳಿ ನಿರ್ಧಾರಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಡಿಸೆಂಬರ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 33.50 ರೂ. ನೀಡಲಾಗುತ್ತಿತ್ತು. ಇದೀಗ 1.50 ಕಡಿತಗೊಳಿಸಿದ್ದು, 32 ರೂ.ಗೆ ಇಳಿಕೆಯಾಗಿದೆ. ಬರಗಾಲದಲ್ಲಿ ಹಾಲಿನ ದರ ಕಡಿತಗೊಳಿಸಿರುವುದಕ್ಕೆ ರೈತ ಸಂಘ ಕಿಡಿಕಾರಿದೆ.
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ