ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಗೋರಖ್ ಪುರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಒಟ್ಟು ಆಸ್ತಿ ಮೌಲ್ಯ 1,54,94,054 ರು ಎಂದು ಘೋಷಿಸಿದ್ದಾರೆ.
ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಗೋರಖ್‍ಪುರ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಆಸ್ತಿ ವಿವರವನ್ನು ನೀಡಿ, ಬ್ಯಾಂಕ್ ಖಾತೆಗಳ ಬಾಕಿ ಹಾಗೂ ಸ್ಥಿರ ಠೇವಣಿಗಳನ್ನು ಒಳಗೊಂಡಿದೆ.
49,000 ಮೌಲ್ಯದ 20 ಗ್ರಾಂ ತೂಕದ ಚಿನ್ನದ ಕಿವಿಯೋಲೆ ಮತ್ತು 20,000 ಮೌಲ್ಯದ 10 ಗ್ರಾಂ ತೂಕದ ರುದ್ರಾಕ್ಷಿ ಹೊಂದಿರುವ ಚಿನ್ನದ ಸರ ಹಾಗೂ 12,000 ಬೆಲೆಯ ಸ್ಮಾರ್ಟ್‍ಫೋನ್ ಅನ್ನು ಹೊಂದಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ರಿವಾಲ್ವರ್ ಹಾಗೂ ರೈಫಲ್‍ನ್ನು ಹೊಂದಿದ್ದಾರೆ ಅವುಗಳ ಮೌಲ್ಯಗಳು ಕ್ರಮವಾಗಿ 1,00,000 ಹಾಗೂ 80,000 ಇದೆ ಎಂದು ಘೋಷಿಸಿದ್ದಾರೆ.
2016-17ರಲ್ಲಿ 8,40,998 ರೂ. ಗಳಿದ್ದ ಅವರ ಆದಾಯವು 2020-21 ರ 13,20,653ಗಳಷ್ಟು ಹೆಚ್ಚಾಗಿದೆ. ಆದರೆ ಅವರ ಹೆಸರಿನಲ್ಲಿ ಈ ಬಾರಿಯೂ ಯಾವುದೇ ವಾಹನ ನೋಂದಣಿಯಾಗಿಲ್ಲ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ