January 9, 2025

Newsnap Kannada

The World at your finger tips!

sudhakar1

ರಾಜ್ಯದಲ್ಲಿ 1.87 ಲಕ್ಷ ಜನರಿಗೆ ಈವರೆಗೆ ಲಸಿಕೆ: ಸಚಿವ ಸುಧಾಕರ್

Spread the love

ಕೊರೊನಾ ಲಸಿಕೆ ಅಭಿಯಾನದಡಿ, ಈವರೆಗೆ 1,87,211 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 7,94,500 ಡೋಸ್ ಕೋವಿಶೀಲ್ಡ್ ಲಸಿಕೆ ಬಂದಿದೆ. ಕೋವ್ಯಾಕ್ಸಿಕ್ ಲಸಿಕೆ ಮೊದಲಿಗೆ 20,000 ಡೋಸ್ ಬಂದಿತ್ತು. ನಂತರ ಮತ್ತೆ 1,46,240 ಡೋಸ್ ಬಂದಿದೆ. ಒಟ್ಟು 1,87,211 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದು ಅತಿ ಹೆಚ್ಚು ಎಂದು ತಿಳಿಸಿದರು.

ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆ. ಹೆಚ್ಚು ಜನರು ಇದನ್ನು ಪಡೆಯಬೇಕು. ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಸಿಎಂ, ಮಂತ್ರಿಗಳಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದರು.

ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಬ್ಬರ ಬಳಿ ಇದ್ದರೆ ನಿರ್ವಹಣೆ ಸುಲಭ. ಕೋವಿಡ್ ಲಸಿಕೆ ಬಂದಿರುವ ಈ ಸಮಯದಲ್ಲಿ ಎರಡೂ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಯಾರಿಗೇ ಆದರೂ ಕೊಡಲಿ, ಆದರೆ ಒಬ್ಬರಿಗೇ ಖಾತೆ ನೀಡಲಿ. ಕೊರೊನಾ ತಾರ್ಕಿಕ ಅಂತ್ಯ ಕಾಣಲು ಇದು ಶಾಶ್ವತವಾಗಿ ಒಂದಾಗಬೇಕು. ಮುಂದೆ ಯಾವುದೇ ಸರ್ಕಾರ ಬಂದರೂ ಹೀಗೆಯೇ ಇರಬೇಕು ಎಂದರು.

ಮುಖ್ಯಮಂತ್ರಿಗಳಿಗೆ ಕಠಿಣ ಸವಾಲಿದೆ. ಲಭ್ಯವಿರುವ ಖಾತೆಯನ್ನು ಹಂಚುವುದು ಸಾಹಸದ ಕೆಲಸ. ಈಗ ನಮ್ಮ ಮುಂದೆ ಅತಿ ಹೆಚ್ಚು ಜನರಿಗೆ ಲಸಿಕೆ ನೀಡುವ ಸವಾಲಿದೆ ಎಂದರು.

Copyright © All rights reserved Newsnap | Newsever by AF themes.
error: Content is protected !!