ಕೆಆರ್‌ಎಸ್ ಅಣೆಕಟ್ಟಿಗೆ 30,216 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ.ಇದನ್ನು ಓದಿ –ಆಗುಂಬೆ ಘಾಟಿನಲ್ಲಿ ಗುಡ್ಡ ಕುಸಿತ : ಭೀಕರ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತ
124.80 ಅಡಿಗಳಷ್ಟು ಇರುವ ಕೆಆರ್‌ಎಸ್ ಡ್ಯಾಂ ಸದ್ಯ 123.20 ಅಡಿಗಳಷ್ಟು ಭರ್ತಿಯಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕ್ಷಣಗಣನೆ ಇರುವ ಕಾರಣ ಡ್ಯಾಂನಿಂದ ನದಿಗೆ 106 ಅಡಿ ಮಟ್ಟದ 15 ಗೇಟ್‍ಗಳ ಮೂಲಕ 25,000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ.
ಕೆಆರ್‌ಎಸ್ ಡ್ಯಾಂ ಸಮೀಪದಲ್ಲೇ ಇರುವ ರಂಗನತಿಟ್ಟು ಪಕ್ಷಿಧಾಮ ಮುಳುಗಡೆಯ ಭೀತಿಯಲ್ಲಿ ಇದೆ. ಹೀಗಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಬೋಟಿಂಗ್‍ನ್ನು ಬಂದ್ ಮಾಡಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದ ಕಾರಣ ಇಲ್ಲಿನ 40ಕ್ಕೂ ಹೆಚ್ಚು ನಡುಗಡ್ಡೆಗಳು ಹಾನಿಯಾಗಿದ್ದವು. ಇದಾದ ನಂತರ ಅರಣ್ಯ ಇಲಾಖೆ ಇಲ್ಲಿನ ನಡುಗಡ್ಡೆಗಳನ್ನು ಮತ್ತೆ ನಿರ್ಮಾಣ ಮಾಡಿತ್ತು. ಇದೀಗ ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಬಿಟ್ಟರೆ ಮತ್ತೆ ಅದೇ ರೀತಿಯ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೇ ಕಾವೇರಿ ಕೊಳ್ಳದ ಜನರಿಗೂ ಸಹ ಪ್ರವಾಹದ ಭೀತಿ ಎದುರಾಗಿದೆ.
ಈಗಾಗಲೇ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆಯನ್ನು ಸಹ ನೀಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು