ಬಿಪಿಎಲ್ ಫಲಾನುಭವಿಗಳು ಕೋವಿಡ್ ನಿಂದಾಗಿ ಮೃತರಾದರೆ 1 ಲಕ್ಷ ರು ಪರಿಹಾರ – ಅಶೋಕ್

Team Newsnap
1 Min Read

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ಕೋವಿಡ್​​ನಿಂದ ಮೃತಪಟ್ಟರೆ ರಾಜ್ಯ ಸರ್ಕಾರ 1 ಲಕ್ಷ ಪರಿಹಾರ ನೀಡಲಿದೆ ಎಂದು ಕಂದಾಯ ಸಚಿವ ಆರ್ .ಅಶೋಕ್ ತಿಳಿಸಿದರು. ‌

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಕೋವಿಡ್ ಈ ಪರಿಹಾರ ಸಂಬಂಧ ಆಕ್ಷೇಪಣೆ ಹಾಗೂ ಕುಂದು ಕೊರತೆಗಳ ನಿವಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರವೂ ಕೂಡ ಕೋವಿಡ್​ನಿಂದ ಮೃತಪಟ್ಟವರಿಗೆ 50 ಸಾವಿರ ರು ಕೊಡುತ್ತಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ರಾಜ್ಯ ಸರ್ಕಾರ ಕೊಡುತ್ತದೆ. ಕೊರೊನಾ ದಿಂದ ಮೃತರಾದ ದುಡಿಯುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರುಗಳನ್ನು ಮೀಸಲಿಡಲಾಗಿದೆ. ಇದುವರೆಗೂ 7,729 ಅರ್ಜಿಗಳು ಬಂದಿದೆ ಎಂದು ತಿಳಿಸಿದರು.

Share This Article
Leave a comment