ಪಿಡಬ್ಲ್ಯೂಡಿ ಜ್ಯೂನಿಯರ್ ಇಂಜಿನಿಯರ್ ಜಗದೀಶ್ ಪೊಲೀಸ್ ಅಧಿಕಾರಿಗಳ ವಶದಲ್ಲಿದ್ದಾರೆ.ಬೆಳಗಾವಿ : ಯಲ್ಲಮ್ಮನ ದರ್ಶನಕ್ಕೆ ಹೊರಟ ವಾಹನ ಭೀಕರ ಅಪಘಾತ; 6 ಮಂದಿ ಸಾವು
ಬುಧವಾರ ಸಂಜೆ ಮಂಡ್ಯ ಮೂಲದ ಜಗದೀಶ್ 10 ಲಕ್ಷ ರೂಪಾಯಿ ಹಣದೊಂದಿಗೆ ವಿಧಾನಸೌಧಕ್ಕೆ ಪ್ರವೇಶ ಮಾಡಿದ್ದರು. ಈ ವೇಳೆ ಈಸ್ಟ್ ಗೇಟ್ನಲ್ಲಿ ಬ್ಯಾಗ್ ಪರಿಶೀಲನೆ ನಡೆಸಿದಾಗ 10.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೂಡಲೇ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು, ತನಿಖೆ ನಡೆಸಿ ಕೋರ್ಟ್ಗೆ ಒಪ್ಪಿಸಿದ್ದಾರೆ.
ತನಿಖೆ ವೇಳೆ ಸಚಿವರೊಬ್ಬರನ್ನು ಭೇಟಿ ಮಾಡಲು ಜಗದೀಶ್ ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಆರೋಪಿ ಎಂಜಿನಿಯರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು