ಬೆಂಗಳೂರು : 10 ಅನಕೊಂಡ ಹಾವುಗಳನ್ನು ಬ್ಯಾಂಕಾಕ್ ನಿಂದ ಅಕ್ರಮವಾಗಿ ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್ ನಿಂದ ಬಂದಿಳಿದ ಪ್ರಯಾಣಿಕನ ಲಗೇಜ್ ಬ್ಯಾಗ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದು ,ಈ ವೇಳೆ ಹತ್ತು ಹಳದಿ ಬಣ್ಣದ ಅನಕೊಂಡ ಹಾವುಗಳು ಪತ್ತೆಯಾಗಿದೆ .
ತಕ್ಷಣ ಅಧಿಕಾರಿಗಳು ಪ್ರಯಾಣಿಕನನ್ನು ಮತ್ತು ಹಾವುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ , ಹಾವುಗಳನ್ನು ಅರಣ್ಯ ಇಲಾಖೆಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
ವನ್ಯಜೀವಿಗಳ ಕಳ್ಳ ಸಾಗಾಣೆ ಆರೋಪದಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
More Stories
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು