ಸೆಪ್ಟೆಂಬರ್ 12 ರಿಂದ ಹತ್ತು ದಿನ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ ಅವರು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು
ಬೀದರ್, ಹಾಸನ, ಚಾಮರಾಜನಗರ, ಕೊಡಗು, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿ ಮಾಡಲು ತೀರ್ಮಾನ ಮಾಡಲಾಗಿದೆ.
ವೈಟ್‌ಫೀಲ್ಡ್ ರೈಲ್ವೇ ನಿಲ್ದಾಣದ ಮೇಲ್ಸೇತುವೆಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ 10 ಖಾಲಿ ಸ್ಥಾನ ಇತ್ತು, ಅದರಲ್ಲಿ 7 ಸ್ಥಾನಗಳನ್ನು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಇನ್ನಿತರ ಹುದ್ದೆ ನೇಮಕ ಆಗಲಿದೆ ಎಂದು ಸಂಪುಟ ಸಭೆಯ ನಿರ್ಣಯಗಳನ್ನು ವಿವರಿಸಿದರು.
- ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
- ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
- MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
- HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು
- ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ