ರಾತ್ರಿ ಬಂಕ್ಗೆ ನುಗ್ಗಿ 10 ಲಕ್ಷ ರೂ. ಮೌಲ್ಯದ ಪೆಟ್ರೋಲ್, ಡೀಸೆಲ್ ರಸ್ತೆಗೆ ಕಿಡಿಗೇಡಿಗಳ ಹರಿಬಿಟ್ಟ ಘಟನೆ ಪಾಂಡವಪುರ ತಾಲ್ಲೂಕಿನ ಬೇಬಿ ಗ್ರಾಮದ ಬಳಿಯ ಇಂಡಿಯನ್ ಪೆಟ್ರೋಲ್ ಬಂಕ್ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬಂಕ್ನ ಸಿಬ್ಬಂದಿ, ರಾತ್ರಿ ಊಟಕ್ಕೆ ತೆರಳಿದ ಸಮಯದಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಹಾಗೂ ಡೀಸೆಲ್ ಪಂಪ್ ಓಪನ್ ಮಾಡಿ ಹೊರಗೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಪೆಟ್ರೋಲ್ ಬಂಕ್ ಶುರುವಾಗಿದೆ ಎನ್ನಲಾಗಿದೆ. ಈ ನಡುವೆ ಎಂಟು ಸಾವಿರ ಲೀಟರ್ ಪೆಟ್ರೋಲ್ ಹಾಗೂ ಎರಡು ಸಾವಿರ ಲೀಟರ್ ಡೀಸೆಲ್ ಸಂಪೂರ್ಣ ನಾಶವಾಗಿದೆ. .
ಭಸ್ತಿರಂಗಪ್ಪ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್ನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು