ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ವಿಧಾನ ಸಭೆಗೆ ಮತದಾನ : ಡಿ 8 ರಂದು ಮತ ಎಣಿಕೆ
ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.
ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದಾರೆ, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಮಕ್ಕಳ ಏಕಾಗ್ರತೆ, ಆರೋಗ್ಯ ವೃದ್ಧಿ, ಒತ್ತಡ ನಿವಾರಣೆ ದೃಷ್ಟಿಯಿಂದ ಸಚಿವರು ಧ್ಯಾನ ಮಾಡಿಸುವ ಮನವಿಗೆ ಸ್ಪಂದನೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು