ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿ ದುಬಾರಿ ದಂಡ ವಿಧಿಸಲಾಗುತ್ತಿತ್ತು.
ಆದರೆ ನಗರದಲ್ಲಿ 1000 ರು. ಗ್ರಾಮೀಣ ಪ್ರದೇಶದಲ್ಲಿ 500 ರು ವಿಧಿಸಲಾಗುತ್ತಿದ್ದ ದಂಡ ಪ್ರಮಾಣವನ್ನು ಕ್ರಮವಾಗಿ 250 ರು ಹಾಗೂ 100 ರು ನಿಗದಿಗೊಳಿಸಲಾಗಿದೆ.
ಈ ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನಸಾಮಾನ್ಯರಿಂದ ಜನಪ್ರತಿನಿಧಿಗಳವರೆಗೆ ವಿರೋಧ ವ್ಯಕ್ತಪಡಿಸಿದ್ದವು. ಈ ಹಿನ್ನಲೆ ರಾಜ್ಯ ಸರ್ಕಾರ ಈ ದಂಡ ಪ್ರಮಾಣ ಇಳಕೆ ಮಾಡಿ ಆದೇಶ ಮಾಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿ , ‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡ ಹೋಗಲು ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರ ವಿರೋಧ ಹಾಗೂ ತಜ್ಞರ ಸಲಹೆಯಂತೆ ಈ ದಂಡದ ದರ ಇಳಿಸಲಾಗಿದೆ ಎಂದಿದ್ದಾರೆ .


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ