ಕರ್ನಾಟಕದಲ್ಲಿ ಭಾನುವಾರ 10,250 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಅಲ್ಲದೇ, ರಾಜ್ಯಾದ್ಯಂತ 40 ಜನ ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ 7,584 ಮಂದಿಗೆ ಕೊರೊನಾ ದೃಢವಾಗಿದೆ. 27 ಜನ ಕೊರೊನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 69,225 ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ ಒಟ್ಟು 70,000 ಮಂದಿಗೆ ಲಸಿಕೆ ನೀಡಲಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,65,290 ಕ್ಕೆ ಏರಿಕೆ ಕಂಡಿದೆ. ಈ ಪೈಕಿ 9,83,157 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಲ್ಲಿಯವರೆಗೆ 12,889 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 440 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 9,635 ಆಂಟಿಜನ್ ಟೆಸ್ಟ್ 1,23,071 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,32,706 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಜಿಲ್ಲಾವಾರು ವಿವರ :
ಕಲಬುರಗಿ 291, ಬೀದರ್ 290, ಮೈಸೂರು 277, ಹಾಸನ 170, ತುಮಕೂರು ಮತ್ತು ಧಾರವಾಡದಲ್ಲಿ 150, ದಕ್ಷಿಣ ಕನ್ನಡ 133, ರಾಯಚೂರು 103, ಬಳ್ಳಾರಿಯಲ್ಲಿ 103 ಮಂದಿಗೆ ಸೋಂಕು ಬಂದಿದೆ. ಒಟ್ಟು 440 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 177, ಕಲಬುರಗಿ 44, ಕೋಲಾರ 33, ಮೈಸೂರು 23, ಮತ್ತು ತುಮಕೂರಿನಲ್ಲಿ 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಸುಮಲತಾ ಆಪ್ತ ಬೇಲೂರು ಸೋಮು ಕಾಂಗ್ರೆಸ್ ಗೆ ಸೇರ್ಪಡೆ
- ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು