ಸಿಬಿಎಸ್ ಸಿ 10ನೇ ತರಗತಿ ಪರಿಕ್ಷೆಯೇ ರದ್ದು – 12 ನೇ ತರಗತಿ‌ ಪರೀಕ್ಷೆ ಮುಂದಕ್ಕೆ : ಮಂಡಳಿ ನಿರ್ಧಾರ

Team Newsnap
1 Min Read

ಎರಡನೇ ಹಂತದ ಕರೋನಾ ದೇಶಾದ್ಯಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಸಿ ಮಂಡಳಿ
10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಅಲ್ಲದೆ 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಿದೆ.

ಸಿಬಿಎಸ್​ಇ ಮಂಡಳಿ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದರು. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಿದೆ, ಹಾಗಂತ ಆನ್​ಲೈನ್​ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳಲಾಗುವುದಿಲ್ಲ.

ಈ ಕಾರಣಕ್ಕಾಗಿ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದೆ .
ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಕೊರೊನಾ ಸೋಂಕಿನ ಹೆಚ್ಚಳದಿಂದ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಕೋರಿ 2 ಲಕ್ಷಕ್ಕೂ ಹೆಚ್ಚು ಪಿಟಿಷನ್ ಸಲ್ಲಿಸಲಾಗಿತ್ತು. ಈ ಮೊದಲು ಬಿಡುಗಡೆಯಾಗಿದ್ದ ವೇಳಾಪಟ್ಟಿಯ ಪ್ರಕಾರ ಮೇ 4ರಿಂದ ಜೂನ್​ 10ರವರೆಗೆ ಎರಡು ತರಗತಿಗಳಿಗೆ ಪರೀಕ್ಷೆ ನಡೆಯಲಿದೆ ಎನ್ನಲಾಗಿತ್ತು.

Share This Article
Leave a comment