ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಬುಧವಾರ ನಡೆದ ಭೀಕರ ರೈಲು ದುರಂತದಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಪಡೆದ ರೈಲ್ವೇ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಹೇಗೆ ನಡೆದಿದೆ?
ಮೊದಲು ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದನ್ನು ಬೆಂಕಿ ಎಂದು ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಚೈನ್ ಎಳೆಯುವ ಮೂಲಕ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರು. ಭಯದಿಂದ ರಕ್ಷಣೆ ಪಡೆಯಲು ಕೆಲವರು ರೈಲಿನಿಂದ ಕೆಳಗೆ ಜಿಗಿದು ಪಕ್ಕದ ಹಳಿಗೆ ತೆರಳಿದರು.
ಈ ಸಮಯದಲ್ಲಿ ವೇಗವಾಗಿ ಬಂದ ಕರ್ನಾಟಕ ಎಕ್ಸ್‌ಪ್ರೆಸ್, ಪಕ್ಕದ ಹಳಿಯ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ದುರಂತದಿಂದಾಗಿ ಹಲವು ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನು ಓದಿ –ಖೋಟಾ ನೋಟ್ ಪ್ರಿಂಟ್ ಮಾಡುತ್ತಿದ್ದ ಅಪ್ಪ – ಮಗನಬಂಧನ
ಕರ್ನಾಟಕ ಎಕ್ಸ್‌ಪ್ರೆಸ್ ದೆಹಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರೆ, ಪುಷ್ಪಕ್ ಎಕ್ಸ್‌ಪ್ರೆಸ್ ಉತ್ತರ ಪ್ರದೇಶದ ಲಕ್ನೋದಿಂದ ಮುಂಬೈಗೆ ತೆರಳುತ್ತಿತ್ತು. ಈ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಯುತ್ತಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು