11 ಮಾಹಾ ನಗರ ಪಾಲಿಕೆ ವ್ಯಾಪ್ತಿ : 11 ಸರ್ಕಾರಿ ಪ್ರಥಮ‌ ದಜೆ೯ ಸಂಜೆ ಕಾಲೇಜುಗಳ ಆರಂಭ

Team Newsnap
1 Min Read

ರಾಜ್ಯದ 11 ಮಾಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 11 ಸರ್ಕಾರಿ ಪ್ರಥಮ‌ ದಜೆ೯ ಸಂಜೆ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

2021-22ನೇ ಸಾಲಿನ ಅಯವ್ಯಯ ಘೋಷಣೆಯಂತೆ ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.

ರಾಜ್ಯದ 11 ನಗರಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಪ್ರಸ್ತುತ ಅಸ್ತಿತ್ವದಲ್ಲಿರುವ ಮೂಲ ಸೌಕರ್ಯಗಳನ್ನು ಉಪಯೋಗಿಸಿಕೊಂಡು, ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿಗೆ ಅವಕಾಶ ಕಲ್ಪಿಸುವ ಕೋಸ್೯ ಗಳಾದ ಬಿ.ಕಾಂ ಮತ್ತು ಬಿಸಿಎಗಳನ್ನು ಸಂಧ್ಯಾ ಶಕ್ತಿ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ರಾಜ್ಯದ 11 ಪಾಲಿಕೆಗಳ ವ್ಯಾಪ್ತಿಯಲ್ಲಿ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಎಲ್ಲಿ ? ಎಲ್ಲಿ? ಆರಂಭ – ವಿವರ ಹೀಗಿದೆ.

  • ಸರ್ಕಾರಿ ಆರ್ ಸಿ ಕಾಲೇಜು, ಬೆಂಗಳೂರು
  • ಸರ್ಕಾರಿ ಪ್ರಥಮ ದರ್ಜೆ ಮಹೀಳಾ ಕಾಲೇಜು, ಬೆಳಗಾವಿ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ ಮೈಸೂರು
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂ.ಸಿಸಿ ಬ್ಲಾಕ್ ದಾವಣಗೆರೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ವಿಜಯಪುರ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಕಲಬುರಗಿ
  • ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ
Share This Article
Leave a comment