ಛತ್ತೀಸ್‌ಗಢದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಚಾಲಕ ಹಾಗೂ 10 ಪೊಲೀಸ್ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ ಜರುಗಿದೆ.
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದರು.ಈ ವೇಳೆ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಐಇಡಿಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ.
ಈ ಘಟನೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ಎಂದು ತಿಳಿಸಿದರು.
ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು