ನಾಳೆ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ವರದಿ ಮಾಡಲು ಸಿದ್ದತೆ ಮಾಡಿಕೊಂಡಿದ್ದ 12 ಮಂದಿ ಪತ್ರಕರ್ತರಿಗೆ ಕರೋನಾ ಪಾಸಿಟಿವ್ ಬಂದಿದೆ.
ಮತ ಎಣಿಕೆ ಕಾರ್ಯಕ್ಕಾಗಿ ಪಾಸ್ ಪಡೆಯುವ ಉದ್ದೇಶದಿಂದ ಪತ್ರಕರ್ತರು ಸಹ ಕರೋನಾ ವರದಿ ಪಡೆಯಬೇಕಿತ್ತು,
ಈ ಕಾರಣದಿಂದ 70 ಮಂದಿ ಪತ್ರಕರ್ತರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು,ಇದರಲ್ಲಿ 12 ಮಂದಿಗೆ ಕರೋನ ಪಾಸಿಟಿವ್ ಬಂದಿದೆ 11 ಮಂದಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ,ಹೀಗಾಗಿ ಜಿಲ್ಲಾಡಳಿತ ಕರೋನಾ ಭಾದಿಸಿರುವ ಪತ್ರಕರ್ತರು ಹೋಮ್ ಐಸುಲೇಷನ್ ಇರುವಂತೆ ಸಲಹೆ ಕೊಟ್ಟರು.
ಬೆಳಗಾವಿ ಪತ್ರಕರ್ತರ ಚಿಕಿತ್ಸಾ ಸೌಲಭ್ಯಕ್ಕೆ ಡಿಸಿಎಂ ಸವದಿ ಸೂಚನೆ :
ಬೆಳಗಾವಿ ಜಿಲ್ಲೆಯಲ್ಲಿ 12 ಮಂದಿ ಪತ್ರಕರ್ತರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯಗಳನ್ನು ಮತ್ತು ಔಷಧೋಪಚಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ ಅಂಜುಂ ಪರ್ವೇಜ್ ಅವರಿಗೆ ಖುದ್ದಾಗಿ ಮಾತನಾಡಿ ಸೂಚನೆ ನೀಡಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ