February 22, 2026

Newsnap Kannada

The World at your finger tips!

vaishno devi

ಶ್ರೀನಗರದ ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವು

Spread the love

ಶ್ರೀನಗರ: ಹೊಸ ವರ್ಷದ ಮೊದಲ ದಿನ ದೇವಿಯ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಶನಿವಾರ ನಸುಕಿನ ಜಾವ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನ್​​ನಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆಯಲು ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ವೇಳೆ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಸಂಭವಿಸಿದೆ

ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದಾರೆ ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಕೆಲವರ ಸ್ಥಿತಿ ಗಂಭೀರವಾಗಿದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಗಾಯಗೊಂಡರವನ್ನು ಸ್ಥಳೀಯ ನಾರೈನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಸದ್ಯ ಯಾತ್ರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

error: Content is protected !!