ಗುಜರಾತ್‌ನ ಮೋರ್ಬಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಸಾವನ್ನಪ್ಪಿದ್ದಾರೆ

Team Newsnap
1 Min Read
12 people killed due to wall collapse in gujrat

ಗುಜರಾತ್‌ನ ಮೊರ್ಬಿ ಪ್ರದೇಶದಲ್ಲಿ ಬುಧವಾರ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು ಈ ಘಟನೆ ನಡೆದಿದೆ.

ಗೋಡೆ ಕುಸಿದು ಬಿದ್ದಾಗ ಸುಮಾರು 30 ಕಾರ್ಮಿಕರು ಅವಶೇಷಗಳಡಿ ಸಿಲುಕಿ ನಜ್ಜುಗುಜ್ಜಾಗಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹಲ್ವಾಡ್ ಕೈಗಾರಿಕಾ ಪ್ರದೇಶದ ಒಳಗಿರುವ ಸಾಗರ್ ಸಾಲ್ಟ್ ಕಾರ್ಖಾನೆಯಲ್ಲಿ ಈ ದುರಂತ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ.

ಇದನ್ನು ಓದಿ :LIC ಷೇರು: ಹೂಡಿಕೆದಾರರಿಗೆ 50 ಸಾವಿರ ಕೋಟಿ ರು ನಷ್ಟ!

ಗೋಡೆ ಕುಸಿತದ ಘಟನೆಯ ಬಗ್ಗೆ ಮಾಹಿತಿ ಪಡೆದ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಅಗ್ನಿಶಾಮಕ ದಳದ ವಾಹನಗಳು, ಆಂಬ್ಯುಲೆನ್ಸ್‌ಗಳನ್ನು ವ್ಯವಸ್ಥೆ ಮಾಡಿತು. ಮೋರ್ಬಿ ಪ್ರದೇಶದ ಉಪ್ಪಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ಟ್ವೀಟ್

ಗೋಡೆ ಕುಸಿತದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ ಎಂದು ತಿಳಿಸಿದರು. “ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ :SSLC ಪರೀಕ್ಷೆ ಫಲಿತಾಂಶ – ನಾಳೆ ಮಧ್ಯಾಹ್ನ 12.30ಕ್ಕೆ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಪರಿಹಾರ ಘೋಷಣೆ

ಮೋರ್ಬಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮುಂದಿನ ಬಂಧುಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದರು. ಗಾಯಗೊಂಡಿರುವ ಪ್ರತಿಯೊಬ್ಬರಿಗೂ 50,000 ರೂಪಾಯಿ ಪರಿಹಾರ ನೀಡಲಾಗುವುದು.

Share This Article
Leave a comment