November 23, 2024

Newsnap Kannada

The World at your finger tips!

kavacha

ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ; ಸಿಎಂ ಬೊಮ್ಮಾಯಿ ಲೋಕಾರ್ಪಣೆ

Spread the love

** ಆಸ್ಪತ್ರೆ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನದ ಮೂಲಕ ಆಂಬ್ಯುಲೆನ್ಸ್ ಸೇವೆಗೆ ಆಧುನಿಕ ಸ್ಪರ್ಶ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಬಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಕವಚ ಯೋಜನೆಯಡಿ 710 ಆಂಬ್ಯುಲೆನ್ಸ್ ಕಾರ್ಯನಿರ್ವಹಿಸು ತ್ತಿದ್ದು ಅದರಲ್ಲಿ 155 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದು ಹೇಳಿದರು.

ಇಂದು ಲೋಕಾರ್ಪಣೆಗೊಂಡಿರುವ 120 ಆಂಬ್ಯುಲೆನ್ಸ್ ಗಳು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ALS) ಅಂಬುಲನ್ಸ್ ಆಗಿವೆ ಎಂದು ತಿಳಿಸಿದರು.

ಆಂಬ್ಯುಲೆನ್ಸ್ ಸೇವೆ ಆರೋಗ್ಯ ಸೇವೆಯ ಪ್ರಮುಖ ಅಂಗವಾಗಿದೆ. ತುರ್ತು ಪರಿಸ್ಥಿತಿಗಲ್ಲಿ ಜೀವ ಉಳಿಸಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಹೃದ್ರೋಗ, ಸ್ಟ್ರೋಕ್ ಮುಂತಾದ ಸಂದರ್ಭಗಳಲ್ಲಿ ಗೋಲ್ಡನ್ ಅವರ್ ಎಂದು ಕರೆಯಲ್ಪಡುವ ಸಮಯ ನಿರ್ಣಾಯಕವಾಗಿದ್ದು ಆಂಬ್ಯುಲೆನ್ಸ್ ಸೇವೆಯ ಜಾಲ ವಿಸ್ತರಿಸಿ ಗುಣಮಟ್ಟ ಹೆಚ್ಚಿಸಲು ಹೊಸ ಕಾಯಕಲ್ಪ ನೀಡಲಾಗಿವುದು ಎಂದರು.

2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀ ರಾಮುಲು ಅವಧಿಯಲ್ಲಿ ಆರಂಭವಾದ ಆರೋಗ್ಯ ಕವಚ ಸೇವೆಗೆ ಆಧುನಿಕ ಸ್ಪರ್ಶ ನೀಡಲಾಗುವುದು. ಆಸ್ಪತ್ರೆಗಳ ಮ್ಯಾಪಿಂಗ್, ಜಿಪಿಎಸ್ ತಂತ್ರಜ್ಞಾನ ಅಳವಡಿಸಿಕೊಂಡರೆ ವ್ಯಕ್ತಿ ಕರೆ ಮಾಡಿದ 10-15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪಿ, ಸಮೀಪದ ಆಸ್ಪತ್ರೆಯನ್ನೂ ಗುರುತಿಸಬಹುದು. ಈಗ ನಗರ ಪ್ರದೇಶದಲ್ಲಿ 30-45 ನಿಮಿಷ ಹಾಗೂ ಗ್ರಾಮೀಣ ಭಾಗದಲ್ಲಿ 45 ನಿಮಿಷಕ್ಕಿಂತ ಹೆಚ್ಚು ಸಮಯ ಬೇಕಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗವಾಗಿ ಸೇವೆ ದೊರಕುವಂತೆ ಸುಧಾರಣೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ನೂತನ ಟೆಂಡರ್ ಕರೆದಿದ್ದು ಆದಷ್ಟು ಶೀಘ್ರದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಸುಗಮಗೊಳಿಸಲಾಗುವುದು. ಪ್ರಸ್ತುತ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯವಿದ್ದು, ಮುಂದಿನ ದಿನಗಳಲ್ಲಿ 40-50 ಸಾವಿರ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಲಭ್ಯತೆ ಕಲ್ಪಿಸಲಾಗುವುದು, ಎಂದರು.

5 ಕೋಟಿ ಲಸಿಕೆಯತ್ತ ರಾಜ್ಯ ದಾಪುಗಾಲು :

ರಾಜ್ಯದಲ್ಲಿ ದಿನಕ್ಕೆ ಸರಾಸರಿ 3.8 ಲಕ್ಷ ಡೋಸ್ ಲಸಿಎಕ್ ನೀಡಲಾಗುತ್ತಿದ್ದು ಇದು ಇಡೀ ರಷ್ಯಾ ದೇಶದಲ್ಲಿ ನೀಡುತ್ತಿರುವ ಲಸಿಕೆಗಿಂತ ಹೆಚ್ಚಾಗಿದೆ. ಕರ್ನಾಟಕ 5 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸುವತ್ತ ದಾಪುಗಾಲು ಇಡುತ್ತಿದ್ದು ಶೀಘ್ರವೇ ಈ ಮೈಲಿಗಲ್ಲು ತಲುಪಲಿದೆ ಎಂದರು.

Copyright © All rights reserved Newsnap | Newsever by AF themes.
error: Content is protected !!