1,265 ಕೆಜಿ ತೂಕದ ಪ್ರಸಾದದ ಲಡ್ಡು ಅಯೋಧ್ಯೆ ತಲುಪಿದ

Team Newsnap
1 Min Read

ರಾಮಮಂದಿರದ ಪ್ರಾಣ ಪ್ರತಿಷ್ಠೆಗಾಗಿ ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಅಯೋಧ್ಯೆಗೆ ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು ತಲುಪಿದೆ.

ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌ ತಯಾರಿಸಿರುವ , ಹೈದರಾಬಾದ್‌ನಿಂದ ಹೊರಟಿದ್ದ ಬೃಹತ್‌ ಪ್ರಮಾಣದ ಲಡ್ಡುವನ್ನು ಹೊತ್ತ ವಾಹನವು ಅಯೋಧ್ಯೆಯ ಕರಸೇವಕಪುರ ತಲುಪಿದೆ.

ನಾನು ಬದುಕಿರುವವರೆಗೆ ಪ್ರತಿದಿನ ರಾಮಮಂದಿರಕ್ಕಾಗಿ 1 ಕೆಜಿ ಲಡ್ಡು ತಯಾರಿಸುತ್ತೇನೆ ಎಂದು ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್‌ ಮಾಲೀಕ ಎನ್.ನಾಗಭೂಷಣ ರೆಡ್ಡಿ ತಿಳಿಸಿದ್ದಾರೆ.

ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನೆಯ ದಿನಾಂಕವು ಹತ್ತಿರವಾಗುತ್ತಿದ್ದಂತೆ, ಧಾರ್ಮಿಕ ಉತ್ಸಾಹವು ಭಾರತದಾದ್ಯಂತ ಭಕ್ತರನ್ನು ಆವರಿಸಿದೆ.

ಹೈದರಾಬಾದ್‌ನಿಂದ ರಸ್ತೆ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಲಡ್ಡು ಪ್ರಸಾದವನ್ನು ರೆಫ್ರಿಜರೇಟೆಡ್ ಬಾಕ್ಸ್‌ನಲ್ಲಿ ಅಯೋಧ್ಯೆಗೆ ಕೊಂಡೊಯ್ಯಲಾಯಿತು.ತಮಿಳುನಾಡಿಗೆ ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ

ಜನವರಿ 22 ರಂದು ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಲಾಗುವುದು .

Share This Article
Leave a comment