ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಇಂದು ಒಟ್ಟು 14 ಮಂದಿ ಮೃತಪಟ್ಟಿದ್ದು, 74 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಂಬೈ ಪೊಲೀಸ್ ಠಾಣೆಯಲ್ಲಿ ಅಕ್ರಮ ಫಲಕದ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮುಂಬೈ ಮಹಾನಗರದಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾರ್ಮೋಡ ಆವರಿಸಿದ್ದು, ಮುಂಬೈ ನಗರದ ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ.
ಬದ್ಲಾಪುರ್, ಕಲ್ಯಾಣ್ , ಅಂಬರ್‌ನಾಥ್, ಉಲ್ಲಾಸ್‌ನಗರ್ ಮತ್ತು ಥಾಣೆಯಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ.
ಈಗಾಗಲೇ ಮಹಾರಾಷ್ಟ್ರ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದ್ದು , ಥಾಣೆ, ಪಾಲ್‌ಘರ್, ರಾಯ್‌ಗಢ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ.
ಮುಂಬೈನ ಘಟಕೋಪುರದ ಪೆಟ್ರೋಲ್ ಬಂಕ್ ಮೇಲೆ ಬಿರುಗಾಳಿಯ ರಭಸಕ್ಕೆ ದೊಡ್ಡದಾಗಿ ನಿರ್ಮಿಸಲಾಗಿದ್ದ ಜಾಹೀರಾತು ಫಲಕ ಗಾಳಿಯ ರಭಸಕ್ಕೆ ಕುಸಿಯುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.ರೇವಣ್ಣ ರಿಲೀಸ್ : ಬಿಗ್ ರಿಲೀಪ್
ಜಾಹೀರಾತು ಫಲಕ ಬಿದ್ದ ಪರಿಣಾಮ ಪೆಟ್ರೋಲ್ ಬಂಕ್‌ನಲ್ಲಿದ್ದ 7 ಮಂದಿಗೆ ತೀವ್ರ ಗಾಯಗಳಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ