ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಅತಿರೇಕಕ್ಕೆ ತಿರುಗಿದೆ. ಹೀಗಾಗಿ ಭಾನುವಾರ ಬೆಳಿಗ್ಗೆ ಭಾರತೀಯ ವಾಯು ಸೇನೆಯ ಸಿ -17 ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರನ್ನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಕರೆ ತರಲಾಗಿದೆ.
ಭಾರತೀಯ ಸೇನೆಯ ವಿಮಾನದ ಮೂಲಕ ಕಾಬೂಲ್‍ನಿಂದ ಹಿಂಡನ್ ಏರ್ ಫೋರ್ಸ್ ಬೇಸ್‍ನ ಗಾಜಿಯಾಬಾದ್‍ಗೆ ಕರೆತರಲಾಗಿದೆ.
ವಿದೇಶಾಂಗ ಸಚಿವಾಲಯದ ಅರಿಂದಮ್ ಬಾಗ್ಚಿ ಅವರು ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಸ್ಥಳಾಂತರಿಸುವ ಕಾರ್ಯ ಮುಂದುವರಿದಿದೆ. ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರು ಭಾರತಕ್ಕೆ ಬಂದಿಳಿದಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಅಫ್ಘಾನಿಸ್ತಾನದ ಸಂಸದ ನರೇಂದ್ರ ಸಿಂಗ್ ಖಲ್ಸಾ ಅವರು ಕಾಬೂಲ್‍ನಿಂದ ಭಾರತಕ್ಕೆ ಲ್ಯಾಂಡ್ ಆಗುತ್ತಿದ್ದಂತೆ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ನನಗೆ ಅಳು ಬರುತ್ತಿದೆ. ಕಳೆದ 20 ವರ್ಷಗಳಿಂದ ನಾವು ಸಂಪಾದಿಸಿದ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಇದೀಗ ಝೀರೋ ಆಗಿದ್ದೇವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ