ಪ್ರಿಯಕರನಿಗಾಗಿ ತಾಯಿಯ 1 ಕೆಜಿ ಚಿನ್ನಾಭರಣ ಕದ್ದ ಪುತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನಕ್ಕೆ ಕುಮ್ಮಕ್ಕು ನೀಡಿದ ಪ್ರಿಯಕರ ಕೂಡ ಜೈಲು ಸೇರಿದ್ದಾನೆ.
ಈಕೆ ವಿಚ್ಛೇದಿತೆ. ಆತ ಎರಡು ಮಕ್ಕಳ ತಂದೆ. ಇಬ್ಬರ ನಡುವೆಯೂ
ಪ್ರೀತಿಯ ಬಂಧನವಾದ ನಂತರ ಆಗಿರುವ ಕಥೆಯೇ ಬೇರೆ.
ಪ್ರಿಯಕರನಿಗಾಗಿ ತನ್ನ ತಾಯಿಗೆ ಸೇರಿದ 1ಕೆ ಜಿ ಚಿನ್ನಾಭರಣವನ್ನು ಕಳ್ಳತನ ಮಾಡಿದ ಯುವತಿ ಹಾಗೂ ಆಕೆಯ ಪ್ರಿಯತಮನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ :ಬಂಧಿತ ಐಎಎಸ್ ಅಧಿಕಾರಿ ಜೊತೆ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ FIR
ಜಕ್ಕೂರು ಲೇಔಟ್ ನಿವಾಸಿ ರತ್ನಮ್ಮನೇ ಮಗಳು ದೀಪ್ತಿ ವಿರುದ್ಧ ನೀಡಿದ ದೂರಿನ ಮೇರೆಗೆ ದೀಪ್ತಿ ಹಾಗೂ ಪ್ರಿಯಕರ ಮದನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ
ಜಕ್ಕೂರು ಲೇಔಟ್ನಲ್ಲಿ ರತ್ನಮ್ಮ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ದೀಪ್ತಿಗೆ ಡಿವೋರ್ಸ್ ಆಗಿತ್ತು. ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್ಗೆ ಸೇರಿಕೊಂಡಿದ್ದಳು. ಇಲ್ಲಿ ಶುರುವಾದ ಸ್ನೇಹ ಪ್ರೀತಿಗೆ ತಿರುಗಿದೆ. ಮದನ್ಗೆ ಮದುವೆಯಾಗಿ ಇಬ್ಬರೂ ಮಕ್ಕಳಿದ್ದರೂ ದೀಪ್ತಿ ಪ್ರೀತಿಗೆ ಸೈ ಅಂದಿದ್ದ. ಮದನ್ ಪ್ರೀತಿಗೆ ಶರಣಾಗಿದ್ದ ದೀಪ್ತಿ, ಪ್ರಿಯಕರನ ಅಣತಿಯಂತೆ ಮನೆಯಲ್ಲಿದ್ದ ಚಿನ್ನಾಭರಣ ಕದ್ದಿದ್ದಾಳೆ.
ಹಂತ-ಹಂತವಾಗಿ ಸುಮಾರು ಒಂದು ಕೆ.ಜಿ.ಚಿನ್ನ ಕಳ್ಳತನ ಮಾಡಿ ಕೊಟ್ಟಿದ್ದಾಳೆ. ತಾಯಿಗೆ ಅನುಮಾನ ಬಾರದಿರಲು ಕದ್ದ ಜಾಗದಲ್ಲಿ ನಕಲಿ ಚಿನ್ನಾಭರಣ ಇಟ್ಟಿದ್ದಾಳೆ.
ಕೆಲ ದಿನಗಳ ಹಿಂದೆ ಮದುವೆ ಸಲುವಾಗಿ ಒಡವೆ ಧರಿಸಿಕೊಳ್ಳಲು ಬೀರುವಿನಲ್ಲಿ ನೋಡಿದಾಗ ಚಿನ್ನಾಭರಣದಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಬಗ್ಗೆ ಮಗಳನ್ನು ಪ್ರಶ್ನಿಸಿದಾಗ ಗೊತ್ತಿಲ್ಲದಂತೆ ನಟಿಸಿದ್ದಾಳೆ.
ಅನುಮಾನಗೊಂಡು ಆಗಾಗ ಮನೆಗೆ ಬರುತ್ತಿದ್ದ ಮದನ್ ಹಾಗೂ ಮಗಳ ವಿರುದ್ಧ ತಾಯಿ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ.
ಕದ್ದ ಚಿನ್ನವನ್ನು ಮುತ್ತೂಟ್ ಗೋಲ್ಡ್ ಲೋನ್ ಹಾಗೂ ಮಣಪ್ಪುರಂ ಗೋಲ್ಡ್ನಲ್ಲಿ ಅಡಮಾನ ಇಟ್ಟಿದ್ದಾರೆ. ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ