ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದ ಪರಿಣಾಮ ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಜರುಗಿದೆ
ಪರ್ಭಿನ್(4), ಇಷಿಕಾ(3) ಮೃತ ದುರ್ದೈವಿಗಳು.ಇದನ್ನು ಓದಿ –ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಆಯ್ಕೆ
ಸೋಲೂರು ಗ್ರಾಮದಲ್ಲಿನ ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತಿಬ್ಬರಿಗೆ ಗಾಯವಾಗಿದೆ ನೇಪಾಳ ಮೂಲದ ಕುಟುಂಬವೊಂದು ದನದ ಕೊಟ್ಟಿಗೆ ಪಕ್ಕದಲ್ಲೇ ಶೆಡ್ ನಿರ್ಮಿಸಿಕೊಂಡು ವಾಸವಾಗಿತ್ತು.
ಹೋಟೆಲ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ನಿರಂತರ ಮಳೆ ಬರುತ್ತಿದ್ದ ಹಿನ್ನೆಲೆ ಶೆಡ್ ಮೇಲೆ ಏಕಾಏಕಿ ಕೊಟ್ಟಿಗೆ ಗೋಡೆ ಕುಸಿದೆ. ಈ ಹಿನ್ನೆಲೆ ಸ್ಥಳದಲ್ಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೀನಾ ಮತ್ತು ಮೋನಿಷಾರಿಗೆ ಗಾಯವಾಗಿದೆ.
ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುಗಳಿಗೆ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು