ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕಲ್ಲೂರು ಗ್ರಾಮದಲ್ಲಿ ದೇವರನ್ನು ಹಿಡಿದಿದ್ದ ವ್ಯಕ್ತಿ ಮತ್ತು ದರ್ಶನಕ್ಕೆ ಬಂದಿದ್ದ ಮಹಿಳೆ ಮೃತಪಟ್ಟಿದ್ದಾರೆ.
ದೇವರನ್ನು ದಾದನ್‌ದೊಡ್ಡಿ ದರ್ಗಾಕ್ಕೆ ಕರೆದೊಯ್ಯುವ ಸಮಯದಲ್ಲಿ ದೇವರ ಬೆಳ್ಳಿಛತ್ರಿ ವಿದ್ಯುತ್ ತಂತಿಗೆ ತಾಗಿ ಈ ದುರಂತ ನಡೆದಿದೆ ಎಂದು ವರದಿಯಾಗಿದೆ.
ಹಸನ್ ಸಾಬ್ ಮುಲ್ಲಾ ಮತ್ತು ಹುಲಿಗೆಮ್ಮ ಸಾವನ್ನಪ್ಪಿದವರು. . ಗಾಯಾಳುವನ್ನು ಲಿಂಗಸಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು