ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ ಕೃಷಿ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದ ಮೈಗೂರು ಮತಗಟ್ಟೆಗೆ ತೆರಳುತ್ತಿದ್ದ ಗೋವಿಂದಪ್ಪ ಸಿದ್ದಾಪುರ (48) ಮುಧೋಳ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನು ಓದಿ –Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
ಬೀದರ್ ಜಿಲ್ಲೆಯ ಕುಟುಂಬಲ್ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ಣಾ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಆನಂದ್ ತೆಲಾಂಗ್ (32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು