ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಪೆಟ್ರೋಲ್ ಬಾಂಬ್, ತಲ್ವಾರ್ ನಾವೂ ಹಿಡಿಯಬೇಕಾಗುತ್ತೆ : ಪ್ರತಾಪ್ ಸಿಂಹ
ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ.
ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ವಾರ್ತಾ ಇಲಾಖೆ ಆಯುಕ್ತರಾಗಿಯೂ ಮುಂದುವರೆಯಲಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನSpread the love ದೆಹಲಿ, ಡಿಸೆಂಬರ್ 25: ದೆಹಲಿಯ ಸಂಸತ್ ಭವನದ ಬಳಿಯ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ…
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹSpread the love ಮೈಸೂರು: ಸಿದ್ದರಾಮಯ್ಯ 40 ವರ್ಷಗಳಿಂದ ವಿಧಾನಸಭೆಗೆ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು…
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯುSpread the love ಕಾಬೂಲ್: ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನವು ಡಿಸೆಂಬರ್ 24ರ ರಾತ್ರಿ ಏರ್ಸ್ಟ್ರೈಕ್…
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !Spread the love ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್ನ ಕಮ್ಮಸಂದ್ರದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾವು ಕೂಡ…
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆSpread the love ದೆಹಲಿ: ICC ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 23ರಂದು…
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು