ಬೆಂಗಳೂರು: ತಹಸೀಲ್ದಾರ್ ಸೇರಿ ನಾಲ್ವರು ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸೀಲ್ದಾರ್ ವಿ. ನಾಗರಾಜ್, ಪ್ರಥಮ ದರ್ಜೆ ಸಹಾಯಕಿ ಶಿಲ್ಪಾ, ಮ್ಯಾನೇಜರ್ ಮಂಜುನಾಥ, ಕಂಪ್ಯೂಟರ್ ಆಪರೇಟರ್ ಹೇಮಂತ್ ಬಂಧಿತರು.
ಗುರುಪ್ರಸಾದ್ ಅವರು ಜಮೀನಿಗೆ ಸಂಬಂಧಿಸಿದಂತೆ ಆರ್.ಆರ್.ಟಿ. ಶಾಖೆಯಲ್ಲಿ ಪಹಣಿಯಲ್ಲಿನ ಕಲಂ 2 ಮತ್ತು 9 ತಾಳೆ ಮಾಡಿಸಲು ಬೆಂಗಳೂರು ದಕ್ಷಿಣ ತಾಲೂಕು ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದು ,ಕೆಲಸ ಮಾಡಲು ಆರೋಪಿಗಳು 2.50 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಆ.6 ರವರೆಗೆ ಭಾರಿ ಮಳೆ : ಪ್ರಸ್ತುತ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಗುರುಪ್ರಸಾದ್ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಬುಧವಾರ ಆರೋಪಿ ಹೇಮಂತ್ ಮೂಲಕ ಕಚೇರಿಯ ಹೊರಗೆ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ