ಭೀಕರ ಅಪಘಾತ ಪ್ರಕರಣ: ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ – CM ಸಿದ್ದರಾಮಯ್ಯ ಘೋಷಣೆ

Team Newsnap
1 Min Read

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿ 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು. ಮೃತ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ CM ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಕೋರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು, ಕುರುಬೂರು ಬಳಿಯ ಬಸ್-ಕಾರು ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ.  ಮೂವರಿಗೆ ಗಾಯ, ಗಾಯಾಳುಗಳನ್ನು ಜನಾರ್ಧನ್, ಶಶಿಕುಮಾರ್, ಪುನೀತ್ ಎಂಬುದಾಗಿ ಗುರುತಿಸಲಾಗಿದೆ.

ಮೃತರು ಬಳ್ಳಾರಿ ಮೂಲದ ಸಂಗನಕಲ್ ಗ್ರಾಮದ ನಿವಾಸಿಗಳು,ಮೈಸೂರಿನಲ್ಲಿ ಇನ್ನೋವ ಕಾರು ಬಾಡಿಗೆ ಪಡೆದು, ಪ್ರವಾಸಿ ತಾಣಗಳಿಗೆ ಎರಡು ದಿನಗಳಿಂದ ಭೇಟಿ ನೀಡುತ್ತಿದ್ದರು ಎಂದರು.

ಮೇ.27ರಂದು ಬಳ್ಳಾರಿಯ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಚಾಮುಂಡೇಶ್ವರಿ ತಾಯಿಯ ದರ್ಶನದ ಬಳಿಕ ಚಾಮರಾಜನಗರಕ್ಕೆ ತೆರಳಿದ್ದರು. ಬಿಳಿಗಿರಿ ರಂಗನ ಬೆಟ್ಟದಿಂದ ಕಾರಿನಲ್ಲಿ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ವಾಪಾಸ್ಸಾಗುತ್ತಿದ್ದಾಗ ಕುರುಬೂರು ಬಳಿಯಲ್ಲಿ ಖಾಸಗಿ ಬಸ್ಸಿಗೆ ಇನ್ನೋವ ಕಾರು ಡಿಕ್ಕಿಯಾಗಿದೆ ಎಂದು ಹೇಳಿದರು.

ಇಂದು ನಿಗದಿಯಂತೆ ಮೈಸೂರು ರೈಲ್ವೆ ನಿಲ್ದಾಣದಿಂದ ಬಳ್ಳಾರಿಗೆ ತೆರಳಬೇಕಿತ್ತು. ಅದಕ್ಕಾಗಿ ಸಂಜೆ 5ಕ್ಕೆ ರೈಲ್ವೆ ಟಿಕೆಟ್ ಕೂಡ ಕುಟುಂಬಸ್ಥರು ಬುಕ್ ಮಾಡಿದ್ದರು. 

ಗಾಯಾಳುಗಳನ್ನು ಜನಾರ್ಧನ್, ಶಶಿಕುಮಾರ್, ಪುನೀತ್ ಎಂಬುದಾಗಿ ಗುರುತಿಸಲಾಗಿದೆ. ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಓವರ್ ಸ್ಪೀಡ್, ರಾಂಗ್ ರೂಟ್ ಡ್ರೈವಿಂಗ್ ಗೆ 10 ಮಂದಿ ಬಲಿಯಾಗಿದ್ದಾರೆ.

Share This Article
Leave a comment