January 11, 2025

Newsnap Kannada

The World at your finger tips!

congress , mandya , BJP

Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ಮಂಡ್ಯದ ಪತ್ರಕರ್ತನ ಚಿಕಿತ್ಸೆಗೆ 2 ಲಕ್ಷ ಪರಿಹಾರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

Spread the love

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಮಂಡ್ಯದ ಹಿರಿಯ ಪತ್ರಕರ್ತ ಪಿ.ಜೆ. ಚೈತನ್ಯ ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಕನ್ನಡ ಪ್ರಭ, ಪ್ರಜಾವಾರ್ತೆ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಚೈತನ್ಯ ಕುಮಾರ್ ಅವರು
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆಗಾಗಿ ಸುಮಾರು 15 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು.

ಪಿ.ಜೆ. ಚೈತನ್ಯ ಕುಮಾರ್ ಅವರು ಸಂಕಷ್ಟದಲ್ಲಿರುವ ಕಾರಣ ಆ ಕುಟುಂಬಕ್ಕೆ ಆರ್ಥಿಕ ನೆರವು ಕೊಡಿಸುವಂತೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೆಯುಡಬ್ಲ್ಯೂಜೆಗೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ನೆರವು ಕೋರಿದ್ದರು. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ

ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿರುವ ಸಿಎಂ, ಮಾನವೀಯ ದೃಷ್ಟಿಯಿಂದ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೃತಜ್ಞತೆಗಳನ್ನು ಸಲ್ಲಿಸಿದೆ.

Copyright © All rights reserved Newsnap | Newsever by AF themes.
error: Content is protected !!