2 ತಿಂಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ಆತ್ಮಹತ್ಯೆ

Team Newsnap
1 Min Read

ಹಾಸನ: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಂದಿತಾ (23) ಮೃತಪಟ್ಟ ಗೃಹಿಣಿ.

ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ಎರಡು ತಿಂಗಳ ಹಿಂದೆಯಷ್ಟೇ ನಂದಿತಾಳನ್ನು ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.

ಆದರೆ ನಂದಿತಾ ಶನಿವಾರ ತನ್ನ ತವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

WhatsApp Image 2023 07 21 at 9.21.34 PM

ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಮೃತ ದೇಹವನ್ನು ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಶ್ರೀಗಳಿಂದ ಕಾಮಗಾರಿ ಪರಿಶೀಲನೆ

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Share This Article
Leave a comment