January 14, 2026

Newsnap Kannada

The World at your finger tips!

dks

2023 ರ ರಾಜ್ಯ ವಿಧಾನ ಸಭೆ ಚುನಾವಣೆ ಪ್ರಚಾರ ಸಾರಥ್ಯಕ್ಕೆ ಪ್ರಿಯಾಂಕ ಗಾಂಧಿ – DKS

Spread the love

2023 ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ, ಈ ವಿಷಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಕೋರಲಾಗಿದೆ ಎಂದರು.

ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಪಕ್ಷದ ಅಭ್ಯರ್ಥಿಯನ್ನು ವರಿಷ್ಠರೇ ಅಂತಿಮಗೊಳಿಸಲಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ವಿಧಾನ ಪರಿಷತ್‌ ಮತ್ತು ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಮ್ಮ ನಡುವೆ ಹಗ್ಗ-ಜಗ್ಗಾಟ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗಷ್ಟೇ ಉದಯಪುರದಲ್ಲಿ ನಡೆದ ಪಕ್ಷದ ಚಿಂತನ ಶಿಬಿರದಲ್ಲಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ, ಪ್ರಿಯಾಂಕಾ ಸ್ಪರ್ಧಿಸುವುದರಿಂದ ಪಕ್ಷದ ನೈತಿಕತೆ ಹೆಚ್ಚುತ್ತದೆ 2023 ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.

error: Content is protected !!