2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ – ಆಯೋಗ ಸಿದ್ದತೆ

Team Newsnap
1 Min Read

ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ರಾಜ್ಯದ ಡಿಸಿ ಗಳು ಸಿದ್ದತೆ ಕುರಿತು ಸಮಾಲೋಚನೆ ಮಾಡಿದೆ.

ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ. ಬಸವರಾಜು ಸೂಚಿಸಿದ್ದಾರೆ.

ಆಯುಕ್ತ ಬಸವರಾಜು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ್ದಾರೆ.

ಎರಡು ಹಂತದಲ್ಲಿ ಚುನಾವಣೆ

ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನ ಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕೊರೋನಾ ಸಂದರ್ಭದಲ್ಲಿ ಚುನಾವಣೆ ನಡೆಸುವುದೇ ಒಂದು ರೀತಿಯ ಸವಾಲಾಗಿದೆ. ಆದರೆ ಗ್ರಾಮ ಪಂಚಾಯ್ತಿಯು ಪ್ರಜಾ ಪ್ರಭುತ್ವದ ಮೂಲ ಅಡಿಪಾಯವಾಗಿದೆ. ಹಾಗಾಗಿ ಎಲ್ಲಾ ಸೂಕ್ಷ್ಮ ವಿಷಯಗಳ ಮೇಲೂ ಹೆಚ್ಚಿನ ಗಮನಹರಿಸಿ, ಯಾವುದೇ ಲೋಪಗಳಿಲ್ಲದಂತೆ ನ್ಯಾಯಯುತವಾಗಿ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು ಎಂದು ಹೇಳಿದ್ದಾರೆ.

ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕಳೆದ ಶುಕ್ರವಾರ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಚುನಾವಣೆಗೆ ಸಿದ್ಧತೆ ನಡೆಸಿದೆ.

Share This Article
Leave a comment