ಕೆಂಗೇರಿಯಲ್ಲಿ ಲಿಫ್ಟ್ನ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಸಾವು
ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ.
ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್ ತೀವ್ರವಾಗಿ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಕೊಪ್ಪಳ ಮೂಲದವರಾದ ಪೋಷಕರು ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲೇ ಶೆಡ್ನಲ್ಲಿ ವಾಸವಾಗಿದ್ದರು. ಮಗುವಿನ ತಂದೆ ಬಿಜಿಎಸ್ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು.
ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 6 ಅಡಿ ಹೊಂಡ ತೋಡಲಾಗಿತ್ತು. ಆ ಗುಂಡಿಯಲ್ಲಿ ಮಳೆಯಿಂದ ನೀರು ತುಂಬಿಕೊಂಡಿತ್ತು. ಆ ಗುಂಡಿಗೆ ಅಡ್ಡಲಾಗಿ ಏನೂ ಇಟ್ಟಿರಲಿಲ್ಲ. ಅದರ ಸುತ್ತಲೂ ಆಟವಾಡುವ ಸಮಯದಲ್ಲಿ 2 ವರ್ಷದ ಮಗು ವಿನೋದ್ ಕುಮಾರ್ ಗುಂಡಿಗೆ ಬಿದ್ದಿದ್ದ. ವಿಷಯ ಗೊತ್ತಾದ ಕೂಡಲೆ ಮಗುವಿನ ಪೋಷಕರು ಮಗುವನ್ನು ಎತ್ತಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ನೀರಿನಲ್ಲಿ ಮುಳುಗಿದ್ದರಿಂದ ಮಗುವಿನ ಜೀವ ಹೋಗಿತ್ತು. ಕಟ್ಟಡ ನಿರ್ಮಿಸುತ್ತಿದ್ದ ರಮೇಶ್ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ.

More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು