Main News

ಕೆಂಗೇರಿಯಲ್ಲಿ ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಸಾವು

ಕೆಂಗೇರಿಯಲ್ಲಿ ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಸಾವು

ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ.

ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ‌ ಮಗು ಸಾವನ್ನಪ್ಪಿದೆ.

ಕೊಪ್ಪಳ ಮೂಲದವರಾದ ಪೋಷಕರು ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲೇ ಶೆಡ್​ನಲ್ಲಿ ವಾಸವಾಗಿದ್ದರು. ಮಗುವಿನ ತಂದೆ ಬಿಜಿಎಸ್ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು.

ಕಟ್ಟಡಕ್ಕೆ ಲಿಫ್ಟ್​ ಅಳವಡಿಸಲು 6 ಅಡಿ ಹೊಂಡ ತೋಡಲಾಗಿತ್ತು. ಆ ಗುಂಡಿಯಲ್ಲಿ ಮಳೆಯಿಂದ ನೀರು ತುಂಬಿಕೊಂಡಿತ್ತು. ಆ ಗುಂಡಿಗೆ ಅಡ್ಡಲಾಗಿ ಏನೂ ಇಟ್ಟಿರಲಿಲ್ಲ. ಅದರ ಸುತ್ತಲೂ ಆಟವಾಡುವ ಸಮಯದಲ್ಲಿ 2 ವರ್ಷದ ಮಗು ವಿನೋದ್​ ಕುಮಾರ್ ಗುಂಡಿಗೆ ಬಿದ್ದಿದ್ದ. ವಿಷಯ ಗೊತ್ತಾದ ಕೂಡಲೆ ಮಗುವಿನ ಪೋಷಕರು ಮಗುವನ್ನು ಎತ್ತಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ನೀರಿನಲ್ಲಿ ಮುಳುಗಿದ್ದರಿಂದ ಮಗುವಿನ ಜೀವ ಹೋಗಿತ್ತು. ಕಟ್ಟಡ ನಿರ್ಮಿಸುತ್ತಿದ್ದ ರಮೇಶ್ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024