ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ಕುಟುಂಬಕ್ಕೆ 20 ಲಕ್ಷ ಪರಿಹಾರ : ಪರ್ವೇಜ್

Team Newsnap
1 Min Read
20 lakh compensation to the family of the person who died in the collapse of the metro pillar: Parvez ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ಕುಟುಂಬಕ್ಕೆ 20 ಲಕ್ಷ ಪರಿಹಾರ : ಪರ್ವೇಜ್

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದ್ದಾರೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಮಹಿಳಾ ಸಂವೇದನೆಯ ಲೇಖಕಿ ಸಾರಾ ಅಬೂಬಕ್ಕರ್ ವಿಧಿವಶ

ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್‌ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.

ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಹೇಳಿದರು.

Share This Article
Leave a comment