ದ್ವಿತೀಯ ಪಿಯುಸಿ ಮೌಲ್ಯಮಾಪಕರಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ

Team Newsnap
1 Min Read
Second PUC result will be announced tomorrow ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷಾ ಮತ್ತು ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಶೇ.20ರಷ್ಟು ಸಂಭಾವನೆ ಹೆಚ್ಚಳ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

ಇದನ್ನು ಓದಿ –ಮಂಡ್ಯ ಜಿಲ್ಲಾ ADC ಶೈಲಜಾಗೆ ಬಡ್ತಿ- ಮಂಡ್ಯದಲ್ಲೇ ಮುಂದುವರಿಕೆ : ರಾಜ್ಯದಲ್ಲಿ 80 KAS ಅಧಿಕಾರಿಗಳಿಗೂ ಬಡ್ತಿ

ಈ ಸಂಭಾವನೆಯು ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ

ಸಂಭಾವನೆ ಪರಿಷ್ಕರಣೆಗೆ ಷರತ್ತುಗಳು

1) ಯುಜಿಸಿ ವೇತನ ಪಡೆಯುವ ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದರೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನು ಮಾತ್ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳನ್ವಯ ನೀಡಬೇಕು. ಇವರಿಗೆ ಬೇರೆ ಯಾವುದೇ ಸಂಭಾವನೆ ನೀಡುವಂತಿಲ್ಲ.

2) ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಉಪನ್ಯಾಸಕರು ಎಸಗುವ ತಪ್ಪುಗಳಿಗೆ ವಿಧಿಸುವ ದಂಡವನ್ನು ಸೂಕ್ತವಾದ ನಿಯಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.

3) ತಗಲುವ ವೆಚ್ಚವನ್ನು ಯೋಜನೇತರ ಅಡಿಯಲ್ಲಿ ಪ್ರಸ್ತುತ ವರ್ಷದಲ್ಲಿ ಇಲಾಖೆಗೆ ಒದಗಿಸಿರುವ ಅನುದಾನದ ಮಿತಿಯಲ್ಲಿಯೇ ಭರಿಸಬೇಕು.

4) ಮೊದಲು 3 ಗಂಟೆಯ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆ ಪತ್ರಿಕೆ ತಯಾರಿಸಲು ಪ್ರತಿಯೊಬ್ಬರಿಗೆ 2082 ರೂ.ನಿಗದಿ ಪಡಿಸಿತ್ತು. ಇದು 2,498 ರೂ.ಗಳಿಗೆ ಹೆಚ್ಚಳವಾಗಿದೆ.

5)ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಇದರ ಪ್ರಮಾಣ 1253 ರೂ.ಗೆ ಏರಿಕೆಯಾಗಿದೆ.

6)ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿರುವ ಹಾಗೂ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ಶೇ.20 ಹೆಚ್ಚಳ ಮಾಡಲಾಗಿದೆ

Share This Article
Leave a comment