ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರು ನೆರವು ನೀಡಲು ನಿರ್ಧರಿಸಲಾಗಿದೆ, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು.
ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರು ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.
ನಾವು ನಾಯಕರಲ್ಲ ಸೇವಕರು:
ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಿದ್ದ ನಾ ನಾಯಕಿ ಕಾರ್ಯಕ್ರಮವನ್ನು ಲೇವಡಿ ಮಾಡಿದ ಅವರು, ನಾ ನಾಯಕ, ನಾ ನಾಯಕಿ ಎಂದು ನಾವು ಹೇಳುವುದಿಲ್ಲ. ಬದಲಾಗಿ ಪ್ರಧಾನಿ ಮೋದಿ ಅವರೇ ಹೇಳಿದಂತೆ ನಾವೆಲ್ಲ ಸೇವಕರು ಎಂದರು.ಜನಪ್ರಿಯ ಬಜೆಟ್ ಬ್ಲೂಪ್ರಿಂಟ್‌ಗೆ ಸಿಎಂ ಸೂಚನೆ- ಎಲೆಕ್ಷನ್ ಬಜೆಟ್‌ನಲ್ಲಿ ಬಂಪರ್ ಗಿಫ್ಟ್
ಅಲೆಮಾರಿಗಳಿಗೆ ನೆಲೆ:
ಕಳೆದ 75 ವರ್ಷಗಳಿಂದ ಆಗದ ಕೆಲಸವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡಿದ್ದು, ದಾಖಲೆಯೇ ಇಲ್ಲದ ತಾಂಡಾಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಅಲೆಮಾರಿಗಳಿಗೆ ನೆಲೆ ನೀಡುವ ಕೆಲಸ ಮಾಡಿದ್ದೇವೆ. ಆ ಮೂಲಕ ಒಂದು ಉದಾತ್ತ ಕೆಲಸ ಮಾಡಿದ ಹೆಮ್ಮೆ ಇದೆ ಎಂದು ಸಚಿವ ಅಶೋಕ ಹೇಳಿದರು.
ಮಾಚನಾಳ ತಾಂಡಾಕ್ಕೆ ₹ 1 ಕೋಟಿ: ಹಕ್ಕುಪತ್ರ ವಿತರಣೆಯ ಬಳಿಕ ಮಾಚನಾಳ ತಾಂಡಾ ಗ್ರಾಮವಾಗಿ ಪರಿವರ್ತನೆಯಾಗಲಿದ್ದು, ಗ್ರಾಮದ ಸಮಗ್ರ ಅಭಿವೃದ್ಧಿಗೆ ₹ 1 ಕೋಟಿ ನೆರವು ನೀಡಲಾಗುವುದು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಹಕ್ಕುಪತ್ರ ವಿತರಣೆಯ ಬಗ್ಗೆ ಈಗ ತಕರಾರು ತೆಗೆಯುವ ಕಾಂಗ್ರೆಸ್ಸಿಗರು ಇಷ್ಟು ವರ್ಷ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಇದ್ದರು.
- ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
- ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
- MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
- HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು
- ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
- ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು : ಬೆಂಕಿ ಹೊತ್ತಿಕೊಂಡು ಚಾಲಕ ಸಜೀವದಹನ
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ