2021 ರ ನೀಟ್ ಪಿಜಿ ಪರೀಕ್ಷೆಯನ್ನು ಸೆಪ್ಟಂಬರ್ 11 ರಂದು ನಡೆಸಲು ನಿರ್ಧರಿಸಲಾಗಿದೆ.
ಈ ವಿಷಯವನ್ನು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ್ ಮಾಂಡವಿಯಾ ತಿಳಿಸಿದ್ದು, 2021 ರ ನೀಟ್ ಪಿಜಿ ಪರೀಕ್ಷೆ ಸೆಪ್ಟೆಂಬರ್ 11 ರಂದು ನಡೆಯಲರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಜುಲೈ 13 ರ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಸೋಮವಾರವಷ್ಟೇ ನೀಟ್ 2021 ಪರೀಕ್ಷೆಯನ್ನು ಸೆಪ್ಟಂಬರ್ 12 ರಂದು ದೇಶದಾದ್ಯಂತ ನಡೆಸಲಾಗುವುದು ಎಂದು ಕೇಂದ್ರ ಪ್ರಕಟಿಸಿತ್ತು.
ಈ ಮೊದಲು ಆಗಸ್ಟ್ 1 ರಂದು ಪರೀಕ್ಷೆ ನಡೆಸುವುದಾಗಿ ಹೇಳಿದ್ದು, ದಿನಾಂಕ ಬದಲಾವಣೆಯಾಗಿ ಸೆಪ್ಟೆಂಬರ್ 11 ರಂದು ನೀಟ್ ಸ್ನಾತಕೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಮನಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ 3862 ಪರೀಕ್ಷಾ ಕೇಂದ್ರಗಳಿದ್ದು, ಈ ಸಾಲಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಳ ಮಾಡಲಾಗುವುದು. ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು ಕೂಡ 150 ರಿಂದ 198ಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಲಾಗಿದೆ.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!